ಬೆಂಗಳೂರು: ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ತಾಯಿ-ಮಗಳು ಯತ್ನ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ತಾಯಿ-ಮಗಳು ಇಬ್ಬರೂ ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ತಾಯಿ-ಮಗಳು ಇಬ್ಬರೂ ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಈ ತಾಯಿ ಮಗಳು, ದೆಹಲಿಯಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದು. ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಬಿಗಿ ಭದ್ರತೆ ಒದಗಿಸಲಾಗಿದೆ. ಇದರ ನಡುವೆಯೇ ತಾಯಿ, ಮಗಳು ಪರಾರಿಯಾಗಲು ಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ.

ಕ್ವಾರಂಟೈನ್ ನಿಂದ ತಪ್ಪಿಸಿಕೊಂಡು ಕಾರಿನಲ್ಲಿ ತಪ್ಪಿಸಿಕೊಳ್ಳಲು ತಾಯಿ, ಮಗಳು ಮುಂದಾಗಿದ್ದಾರೆ. ಅವರ ಕೈಯಲ್ಲಿ ರೆಡ್ ಝೊನ್ ಎಂಬ ಮುದ್ರೆ ಕೂಡ ಇತ್ತು. 

ದೇವನಹಳ್ಳಿ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಬೆಂಗಳೂರು ನಗರಕ್ಕೆ ಹೋಗಲು ಮುಂದಾಗಿದ್ದಾರೆ. ಸಿ ಎಸ್ ಸಿ ( ಸಾಮಾನ್ಯ ಸೇವಾ ಕೇಂದ್ರ) ತಂಡದಿಂದ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಪೊಲೀಸರು ತಾಯಿ- ಮಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಕ್ವಾರಂಟೈನ್ ಗೆ ಒಪ್ಪಿಗೆ ಸೂಚಿಸಿದ್ದಾರೆ. ಬಳಿಕ ಅವರನ್ನು ಕ್ವಾರಂಟೈನ್‌ಗೆ ಕಳುಹಿಸಲಾಗಿದೆ. ಅವರಿಬ್ಬರೂ ಕಾರಿನಲ್ಲಿ ಕುಳಿತಿದ್ದರಿಂದ ಕಾರಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com