ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಜ್ಯದಲ್ಲಿ ಕೊರೋನಾ ರಣಕೇಕೆ: ಇಂದು 3 ಸಾವು, 135 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ!

ಕರ್ನಾಟಕದಲ್ಲಿ ಇಂದು ಮೂವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು ಹೊಸದಾಗಿ 135 ಕೊರೋನಾ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮೂವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು ಹೊಸದಾಗಿ 135 ಕೊರೋನಾ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಸಚಿವಾಲಯ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮಧ್ಯಾಹ್ನದವರೆಗೂ 135 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ. ಈವರೆಗೂ 762 ಮಂದಿ  ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇಂದು ಕಲಬುರ್ಗಿ - 28 , ಉತ್ತರ ಕನ್ನಡ - 06, ಚಿಕ್ಕಮಗಳೂರು - 03, ದಕ್ಷಿಣ ಕನ್ನಡ - 11, ಯಾದಗಿರಿ - 16, ಹಾಸನ-14, ಉಡುಪಿ-09, ಬೆಂಗಳೂರು ನಗರ -06, ಬೆಂಗಳೂರು ಗ್ರಾಮಾಂತರ -02, ಬಳ್ಳಾರಿ -01, ಬೀದರ್-12, ಬೆಳಗಾವಿ-04, ರಾಯಚೂರು-05, ವಿಜಯಪುರ-02, ಮಂಡ್ಯ-01, ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ.

ಇಂದು ಕೊರೋನಾ ವೈರಸ್ ಗೆ ಬೀದರ್ ನಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಬೀದರ್‌ನ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ  ಸೋಂಕು ಪತ್ತೆಯಾಗಿತ್ತು. ಅವರನ್ನು P-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬ್ರೀಮ್ಸ್‌ನ ಐಸೋಲೇಷನ್ ವಾರ್ಡಿನಲ್ಲಿ ಇಂದು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆರೋಗ್ಯ ಇಲಾಖೆ ನಿಯಮದಂತೆ ಇಂದು ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. ಈ ಮೂಲಕ ಬೀದರ್ ಜಿಲ್ಲೆಯಲ್ಲಿ ಕೊರೋನಾಗೆ ಮೂರನೇ  ಬಲಿಯಾಗಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 46ಕ್ಕೆ ಏರಿಯಾದಂತಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com