ಕೋವಿಡ್-19: ಭಯಬೇಡ ಎಚ್ಚರವಿರಲಿ, ಜನಜಾಗೃತಿ ಕಾರ್ಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ

ನೋವಲ್ ಕೊರೋನಾವೈರಸ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ.
ಬೋಪಯ್ಯ ಚೋವಂಡ ನೇತೃತ್ವದಲ್ಲಿನ ತಂಡ
ಬೋಪಯ್ಯ ಚೋವಂಡ ನೇತೃತ್ವದಲ್ಲಿನ ತಂಡ

ಬೆಂಗಳೂರು: ನೋವಲ್ ಕೊರೋನಾವೈರಸ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ  ಕಾರ್ಯನಿರ್ವಹಿಸುತ್ತಿದೆ.

ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಹಯೋಗದಲ್ಲಿ ಜನಜಾಗೃತಿ ಅಭಿಯಾನ ಕೈಗೊಂಡಿರುವ ರೆಡ್ ಕ್ರಾಸ್ ಸಂಸ್ಥೆ, ಅಸಂಘಟಿತ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್, ಸಾಬೂನ್ ವಿತರಣೆಯಂತಹ ಜನೋಪಕಾರಿ ಕಾರ್ಯದಲ್ಲಿ ನಿರತವಾಗಿದೆ.

ಬೆಂಗಳೂರು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಅಧ್ಯಕ್ಷರಾಗಿದ್ದು, ಕಾರ್ಯದರ್ಶಿ ಬೋಪಯ್ಯ ಚೋವಂಡ ನೇತೃತ್ವದಲ್ಲಿನ ತಂಡ, ಬ್ಯಾಟರಾಯನಪುರ, ಯಲಹಂಕ ಸದಾಶಿವನಗರ, ಭದ್ರಪ್ಪ ಲೇಔಟ್, ಅನೇಕಲ್ ತಾಲೂಕಿನ ಸರ್ಜಾಪುರ, ದೊಮ್ಮಸಂದ್ರ, ಮರಸೂರು, ಹಾಗೂ ಹೆಬ್ಬಗೋಡಿ ಸುತ್ತಮುತ್ತಲಿನ ಸ್ಲಂ ಹಾಗೂ ಅಸಂಘಟಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಸ್ಕ್, ಸ್ಯಾನಿಟೈಸರ್ ವಿತರಿಸುವ ಮೂಲಕ ಸ್ವಚ್ಛತೆ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜನಜಾಗೃತಿ, ಸ್ವಚ್ಛತಾ ಸಲಕರಣೆಗಳ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ವಯಂ ಸೇವಕರು ಸದಾ ಕಾಲ ಸೇವೆಗೆ ಸಿದ್ಧವಿರುವುದಾಗಿ ಬೋಪಯ್ಯ ಚೋವಂಡ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com