ಯಲಹಂಕ ಮೇಲ್ಸೇತುವೆಗೆ ವಿ.ಡಿ, ಸಾವರ್ಕರ್ ಹೆಸರಿಡುವುದಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ!

ಯಲಹಂಕದ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರು ಇಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧಿಸಿವೆ.
ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ
ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ

ಬೆಂಗಳೂರು: ಯಲಹಂಕದ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರು ಇಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧಿಸಿವೆ.

400 ಮೀಟರ್ ಉದ್ಧದ ಮೇಲ್ಸೇತುವೆಯನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ವೀರ ಸಾರ್ವಕರ್ ಜನ್ಮದಿನವಾದ ಗುರುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ವಿ. ಡಿ. ಸಾವರ್ಕರ್ ಹೆಸರಿಡುವ ರಾಜ್ಯಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನ. ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರೊಬ್ಬರ ಹೆಸರಿಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಯಲಹಂಕ ಮೇಲ್ಸೇತುವೆಗೆ  ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕಾಗಿ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ ಎಂದು ಅವರು ಪ್ರಶ್ನಿಸಿದ್ದು, ರಾಜ್ಯಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹಪಡಿಸುವುದಾಗಿ ಹೇಳಿದ್ದಾರೆ.

ಮತ್ತೊಂದೆಡೆ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ವಾಸ ಅನುಭವಿಸಿರುವ ವಿ. ಡಿ. ಸಾವರ್ಕರ್ ಹೆಸರನ್ನು ಯಲಹಂಕ ಮೇಲ್ಸೇತುವೆಗೆ ಇಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಸಮರ್ಥಿಸಿಕೊಂಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com