ಇನ್ನೂ 1,000 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣ ಜಾರಿ: ಸಚಿವ ಸುರೇಶ್ ಕುಮಾರ್

"ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದಲ್ಲಿ ಬೆಳೆಯುವಂತಾಗಲು ಸರ್ಕಾರಿ ಶಾಲೆಗಳ ಘನತೆ  ಉಳಿಸಿಕೊಳ್ಳಲು ಈ ವರ್ಷ ಇನ್ನೂ ಒಂದು ಸಾವಿರ ಶಾಲೆಗಳಲ್ಲಿ ಕನ್ನಡ ಜೊತೆಗೆ ಇಂಗ್ಲಿಷ್ ಅನ್ನು ಬೋಧನಾ ಮಾಧ್ಯಮವಾಗಿ ಪರಿಚಯಿಸಲು ನಾವು ಸಲಹೆ ನೀಡುತ್ತೇವೆ" ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: "ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದಲ್ಲಿ ಬೆಳೆಯುವಂತಾಗಲು ಸರ್ಕಾರಿ ಶಾಲೆಗಳ ಘನತೆ ಉಳಿಸಿಕೊಳ್ಳಲು ಈ ವರ್ಷ ಇನ್ನೂ ಒಂದು ಸಾವಿರ ಶಾಲೆಗಳಲ್ಲಿ ಕನ್ನಡ ಜೊತೆಗೆ ಇಂಗ್ಲಿಷ್ ಅನ್ನು ಬೋಧನಾ ಮಾಧ್ಯಮವಾಗಿ ಪರಿಚಯಿಸಲು ನಾವು ಸಲಹೆ ನೀಡುತ್ತೇವೆ" ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರೊಂದಿಗೆ ವೀಡಿಯೊ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ. ಈಗಾಗಲೇ ಒಂದು ಸಾವಿರ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಕನ್ನಡವನ್ನು ಬೋಧನಾ ಮಾಧ್ಯಮವಾಗಿ ಅಳವಡಿಸಲಾಗಿಮುಂಬರುವ ಶೈಕ್ಷಣಿಕ ವರ್ಷದಲ್ಲಿ ಇನ್ನೂ 1,000 ಶಾಲೆಗಳಿಗೆ ಈ ಪದ್ದತಿ ವಿಸ್ತರಣೆಯಾಗಲಿದೆಎಂದು ಹೇಳಿದರು.

ಇದಲ್ಲದೆ 400 ಉರ್ದು ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷ್ ಅನ್ನು ಬೋಧನಾ ಮಾಧ್ಯಮವಾಗಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಕನ್ನಡವನ್ನು ನಿರ್ಲಕ್ಷಿಸುವುದರ ವಿರುದ್ಧ ಎಚ್ಚರಿಕೆ ನೀಡಿರುವ ಸಚಿವರು  "ಕರ್ನಾಟಕದ ಪ್ರತಿಯೊಂದು ಶಾಲೆಗಳು ಕನ್ನಡವನ್ನು ಕಲಿಸಬೇಕು. ಕನ್ನಡ ಭಾಷಾ ಕಲಿಕೆ ಮಸೂದೆ 2015 ರ ಅನುಷ್ಠಾನವನ್ನು ನಿರ್ಲಕ್ಷಿಸುವ ಶಿಕ್ಷಣ ಸಂಸ್ಥೆಗಳು ಕ್ರಮವನ್ನು ಎದುರಿಸಬೇಕಾಗುತ್ತದೆ. ಈ ಇಲಾಖೆಯು ಈ ಮಸೂದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಬದ್ಧವಾಗಿದೆ. ಕರ್ನಾಟಕದಲ್ಲಿ ಕಲಿಯುವ ಪ್ರತಿ ಮಗುವೂ ಕನ್ನಡ ಕಲಿಯಬೇಕು. ಅರ್ಹ ಶಿಕ್ಷಕರು ಈ ಮಕ್ಕಳಿಗೆ ಕನ್ನಡವನ್ನು ಕಸಬೇಕು. ಕರ್ನಾಟಕದ ಖಾಸಗಿ ಶಾಲೆಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಮಕ್ಕಳ ಹಿತದೃಷ್ಟಿಯಿಂದ ಸರ್ಕಾರದ ಈ ಪ್ರಯತ್ನವನ್ನು ಬೆಂಬಲಿಸಬೇಕು "ಎಂದು ಅವರು ವಿನಂತಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರಿ ಶಾಲೆಗಳ ಸಬಲೀಕರಣದ ಕುರಿತು ವರದಿಯನ್ನು ಸಿದ್ಧಪಡಿಸಿದೆ ಮತ್ತು ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಉಳಿಸಿಕೊಳ್ಳುವುದು ಮುಖ್ಯ ಉದ್ದೇಶವಾಗಿದೆ ಎಂದು ಕುಮಾರ್ ಹೇಳಿದರು. ಕೂಲಿ ಕಾರ್ಮಿಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗ ಸೇರ್ಪಡಿಸಿ  ತಮ್ಮ ಗಳಿಕೆಯ 40 ಪ್ರತಿಶತವನ್ನು ಖರ್ಚು ಮಾಡುವುದನ್ನು ಸರ್ಕಾರ ಬಯಸುವುದಿಲ್ಲ ಎಂದು ಅವರು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com