ಪ್ಯಾರಿಸ್ ನಿಂದ 172 ಪ್ರಯಾಣಿಕರು ಬೆಂಗಳೂರಿಗೆ ಆಗಮನ

ಕೋವಿಡ್-19 ಲಾಕ್ ಡೌನ್  ಪರಿಸ್ಥಿತಿಯಲ್ಲಿ ಫ್ರಾನ್ಸ್ ನ ಪ್ಯಾರಿಸ್ ನಿಂದ ಗುರು ವಾರ ಸಂಜೆ 4 ಗಂಟೆಗೆ  ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತೊಂದನೇ ಏರ್ ಇಂಡಿಯಾ ವಿಮಾನದಲ್ಲಿ 172 ಮಂದಿ  ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.
ಪ್ರಯಾಣಿಕರ ಸಾಂದರ್ಬಿಕ ಚಿತ್ರ
ಪ್ರಯಾಣಿಕರ ಸಾಂದರ್ಬಿಕ ಚಿತ್ರ

ಬೆಂಗಳೂರು: ಕೋವಿಡ್-19 ಲಾಕ್ ಡೌನ್  ಪರಿಸ್ಥಿತಿಯಲ್ಲಿ ಫ್ರಾನ್ಸ್ ನ ಪ್ಯಾರಿಸ್ ನಿಂದ ಗುರು ವಾರ ಸಂಜೆ 4 ಗಂಟೆಗೆ  ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತೊಂದನೇ ಏರ್ ಇಂಡಿಯಾ ವಿಮಾನದಲ್ಲಿ 172 ಮಂದಿ  ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

 ಬೆಂಗಳೂರು  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 172 ಮಂದಿ ಪ್ರಯಾಣಿಕರಲ್ಲಿ  ಒಂದು ಮಗು ಸೇರಿದಂತೆ 123 ಪುರುಷರು ಮತ್ತು 48 ಮಹಿಳೆಯರು ಇದ್ದಾರೆ.

 ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com