ರಿಯಲ್ ಎಸ್ಟೇಟ್ ಡೀಲ್ ವೇಳೆ ಮಾತಿನ ಚಕಮಕಿ: ಬೆಂಗಳೂರು ಉದ್ಯಮಿಗಳಿಂದ ಗುಂಡಿನ ದಾಳಿ

ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಚಿಕ್ಕಮಗಳೂರಿನ ಇಬ್ಬರ ಮೇಲೆ ಗುಂಡಿನ ದಾಳಿ ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ.

Published: 29th May 2020 08:51 AM  |   Last Updated: 29th May 2020 12:41 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಚಿಕ್ಕಮಗಳೂರು: ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಚಿಕ್ಕಮಗಳೂರಿನ ಇಬ್ಬರ ಮೇಲೆ ಗುಂಡಿನ ದಾಳಿ ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ.

ಕಲ್ಯಾಣ್‌ ಕುಮಾರ್‌ ಹಾಗೂ ಉಪನ್ಯಾಸಕ ಸುಮಂತ್‌ ಎಂಬುವವರು ಮಾತುಕತೆ ನಡೆಸುತ್ತಿದ್ದರು, ಈ ವೇಳೆ ಕಾರ್ತಿಕ್ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ, ಇದರಿಂದ ಇಬ್ಬರಿಗೂ, ಎದೆ, ತೋಳಿನ ಭಾಗಕ್ಕೆ ಗುಂಡು ತಗುಲಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
 

Stay up to date on all the latest ರಾಜ್ಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp