ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗಾಗಿ ಕಾಂಗ್ರೆಸ್ ನಿಂದ ಸ್ಪೀಕ್ ಅಪ್ ಇಂಡಿಯಾ ಅಭಿಯಾನ

ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕಾರ್ಮಿಕರು, ರೈತರು ಮತ್ತು ಜನ ಸಾಮಾನ್ಯರ ಕಷ್ಟಗಳ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಸ್ಪೀಕ್ ಇಂಡಿಯಾ ಅಭಿಯಾನ ಆರಂಭಿಸಿದೆ.

ಬೆಂಗಳೂರು: ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕಾರ್ಮಿಕರು, ರೈತರು ಮತ್ತು ಜನ ಸಾಮಾನ್ಯರ ಕಷ್ಟಗಳ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಸ್ಪೀಕ್ ಇಂಡಿಯಾ ಅಭಿಯಾನ ಆರಂಭಿಸಿದೆ.

ವಲಸೆ ಕಾರ್ಮಿಕರಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು, ನರೇಗಾ ಯೋಜನೆಯ ವಾರ್ಷಿಕ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು, ದೇಶದ ಎಲ್ಲಾ ಬಡ ಕುಟುಂಬಗಳಿಗೆ ತಕ್ಷಣ 10 ಸಾವಿರ ವರ್ಗಾವಣೆ ಮಾಡಬೇಕು, ಸಣ್ಣ ವ್ಯಾಪಾರಿಗಳಿಗೆ ಸಾಲದ ಬದಲಾಗಿ ಅನುದಾನ ನೀಡಬೇಕು. ಕೇಂದ್ರದ 20 ಲಕ್ಷ ಪ್ಯಾಕೇಜ್ ಅನುಪಯುಕ್ತ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

ರೈತರು, ಕಾರ್ಮಿಕರು, ಕೂಲಿಕಾರರು, ಯುವ ಜನರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸರ್ಕಾರದ ವತಿಯಿಂದ ಯಾವ ನೆರವು ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತರಿಗೆ ಸಹಾಯ ಮಾಡುವ ನ್ಯಾಯ್ ಯೋಜನೆ ಜಾರಿಗೊಳಿಸಲು ಇದು ಸಕಾಲವಾಗಿದೆ ಎಂದು ಶಾಸಕರಾದ ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com