ಒಂದೇ ದಿನ 53 ಜನರು ಡಿಸ್ಚಾರ್ಜ್: ಆತಂಕದ ನಡುವಲ್ಲೂ ಕೊಂಚ ನಿರಾಳ

ರಾಜ್ಯದಲ್ಲಿ ಗುರುವಾರ ಮತ್ತೆ 115 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಆತಂಕದ ನಡುವಲ್ಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಕೊಂಚ ನಿರಾಳವನ್ನೂ ನೀಡುತ್ತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಮತ್ತೆ 115 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಆತಂಕದ ನಡುವಲ್ಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಕೊಂಚ ನಿರಾಳವನ್ನೂ ನೀಡುತ್ತಿದೆ. 

ರಾಜ್ಯದಲ್ಲಿ ಒಟ್ಟು 2,533 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ನಿನ್ನೆ ಒಂದೇ ದಿನ 53 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾಗಿರುವವರ ಸಂಖ್ಯೆ 834ಕ್ಕೆ ಏರಿಕೆಯಾಗಿದೆ. 

ಇನ್ನೂ 1,650 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ವರೆಗೆ 49 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತ ಸಾವಿನ ದರ ಶೇ.1.85ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com