ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ 200 ರೂ ದಂಡ: ಆರೋಗ್ಯ ಸಚಿವ ಬಿ ಶ್ರೀರಾಮುಲು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ವೈಯಕ್ತಿಕ ಕಾಳಜಿ, ಸುರಕ್ಷತೆ ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ವೈಯಕ್ತಿಕ ಕಾಳಜಿ, ಸುರಕ್ಷತೆ ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ಸಾರ್ವಜನಿಕರು ಏನೇನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಪ್ರತಿದಿನ ಎಚ್ಚರಿಕೆ ಕೊಡುತ್ತಲೇ ಇದೆ, ಆದರೆ ಇದನ್ನು ಎಷ್ಟು ಮಂದಿ ಪಾಲಿಸುತ್ತಿದ್ದಾರೆ ಎಂಬುದು ಪ್ರಶ್ನೆ. ಸಾರ್ವಜನಿಕವಾಗಿ ಓಡಾಡುವಾಗ ಜನರು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳುತ್ತಿದ್ದರೂ ಕೆಲವರು ಮಾತ್ರ ಪಾಲಿಸುತ್ತಾರೆ. ಬಹುತೇಕರು ಉಲ್ಲಂಘಿಸುತ್ತಾರೆ, ಆಗ ಸರ್ಕಾರಕ್ಕಿರುವ ಅಸ್ತ್ರ ದಂಡ ಹಾಕುವುದು.

ಕೊರೋನಾ ಪೀಡಿತರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಹಾಕದಿದ್ದರೆ ದಂಡ ಎಂಬ ನಿಯಮವನ್ನು ಈಗಾಗಲೇ ಕೆಲವು ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಕೂಡ ಅದೇ ನಿರ್ಧಾರಕ್ಕೆ ಬಂದಿದೆ.

ದಂಡ: ಜನತೆಯ ಸುರಕ್ಷತೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಬೇಕು ಎನ್ನುವ ನಿಯಮವನ್ನು ಉಲ್ಲಂಘಿಸಿದವರಿಗೆ 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಕೊರೋನಾ ಸೋಂಕು ತಗುಲಿರಬಹುದು ಎನ್ನುವ ಸಂದೇಹದ ಮೇಲೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾದ ನಂತರ ಶಂಕಿತ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬರದೆ ಇದ್ದಲ್ಲಿ, ಅಂತಹವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಬಹುದೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಈ ಕುರಿತು ಇಲಾಖೆ ಆದೇಶ ಹೊರಡಿಸಿದ್ದು, ಒಂದು ವಾರದ ಬಳಿಕ ಸೋಂಕಿನ ಲಕ್ಷಣಗಳಿಲ್ಲದ ವ್ಯಕ್ತಿಯನ್ನು ಆರ್.ಟಿ.ಪಿ.ಸಿ.ಆರ್ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯವಿಲ್ಲ, ಕೇವಲ ಥರ್ಮಲ್ ಸ್ಕ್ರೀನಿಂಗ್ ಮಾಡಿ ಹೋಂ ಕ್ವಾರಟೈನ್‌ಗೆ ಒಳಪಡಿಸಬಹುದು ಎಂದು ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com