ಲಂಚ ಸ್ವೀಕಾರ ಆರೋಪ: ಎಸಿಪಿ ಪ್ರಭುಶಂಕರ್ ಗೆ ಜಾಮೀನು, ಹೈಕೋರ್ಟ್ ಗೆ ಅರ್ಜಿ

ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಅಮಾನತಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್ ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 
ಸಿಸಿಬಿ ಕಚೇರಿ (ಸಂಗ್ರಹ ಚಿತ್ರ)
ಸಿಸಿಬಿ ಕಚೇರಿ (ಸಂಗ್ರಹ ಚಿತ್ರ)

ಬೆಂಗಳೂರು: ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಅಮಾನತಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್ ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 

ಜಾಮೀನು ಮಂಜೂರಾದ ಬೆನ್ನಲ್ಲೇ ಪ್ರಭುಶಂಕರ್ ಶುಕ್ರವಾರ ಎಸಿಬಿ ಮುಂದೆ ವಿಚಾರಣೆಗೆ ಹಾಜರಾದರು. ನಂತರ ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ವಿಚಾರಣೆ ನಡೆಸುವಂತೆ ಕೋರಿದ್ದರು. ಇದಕ್ಕೆ ನ್ಯಾಯಾಲಯ ಸಮ್ಮತಿ ನೀಡಿತ್ತು. ಈ ನಡುವೆ, ತಮ್ಮ ವಿರುದ್ಧ ದಾಖಲಾಗಿರುವ  ಎರಡು ಪ್ರತ್ಯೇಕ ಎಫ್‌ಐಆರ್ ಗಳನ್ನು ರದ್ದುಪಡಿಸುವಂತೆ ಕೋರಿ ಪ್ರಭುಶಂಕರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠ, ಕಾಟನ್ ಪೇಟೆ ಠಾಣಾ ಪೊಲೀಸರು, ಸಿಸಿಬಿ ಮತ್ತು ಪ್ರಕರಣದ ದೂರುದಾರ ಶಾಜಿ ಜಾರ್ಜ್ ಥಾಮಸ್ ಹಾಗೂ ಆದಿಲ್ ಅಜೀಜ್‌ಗೆ ನೋಟಿಸ್ ಜಾರಿಗೊಳಿಸಿದೆ. ವಿಚಾರಣೆಯನ್ನು ಜೂನ್ 3ಕ್ಕೆ  ಮುಂದೂಡಲಾಗಿದೆ. ಪ್ರಭು ಶಂಕರ್ ಅವರು ಲಾಕ್‌ಡೌನ್ ಅವಧಿಯಲ್ಲಿ ಅಕ್ರಮವಾಗಿ ಸಿಗರೇಟ್ ಮಾರಾಟಕ್ಕೆ ನೆರವು ನೀಡುವುದಾಗಿ ತಿಳಿಸಿ ವ್ಯಾಪಾರಿಗಳಿಂದ 62.5 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com