ಮುಖ್ಯಮಂತ್ರಿಗಳಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ರದ್ದುಪಡಿಸಿದ ‘ಸಿ’ ವರ್ಗದ ಗಣಿ ಗುತ್ತಿಗೆ/ ಸ್ಟಾಕ್ ಯಾರ್ಡ್ ಮತ್ತು ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2016ರ ಮುಂಚೆ ಮುಟ್ಟುಗೋಲು ಹಾಕಿಕೊಂಡ ಅಂದಾಜು 8 ಮಿಲಿಯನ್ ಟನ್ ಅದಿರು ಹರಾಜಾಗದೇ ಉಳಿದುಕೊಂಡಿದ್ದು, ಅದಿರನ್ನು ಹರಾಜು ಮಾಡಲು ಇರುವ ತಾಂತ್ರಿಕ ತೊಂದರೆಯನ್ನು ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ಶೀಘ್ರವೇ ವಿಲೇವಾರಿ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.

ರಾಜ್ಯದಲ್ಲಿ ಖನಿಜ ಪರವಾನಗಿ ಇಲ್ಲದೆ, ಅಕ್ರಮ ಕಲ್ಲು ಗಣಿಗಾರಿಗೆ ಮಾಡುತ್ತಿರುವುದನ್ನು ತಡೆಗಟ್ಟಲು ಡ್ರೋನ್ ಸರ್ವೆ ಕೈಗೊಳ್ಳಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಅದಿರಿನ ಖನಿಜಾನ್ವೇಷಣೆಗೆ ಶೀಘ್ರವಾಗಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆದು ಖನಿಜಾನ್ವೇಷಣೆ ಕಾರ್ಯ ಕೈಗೊಳ್ಳುವಂತೆ ಅವರು ತಿಳಿಸಿದರು.

ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿ ಮತ್ತು ಜನರ ಜೀವನ ಮಟ್ಟ ಉತ್ತಮಪಡಿಸಲು ಗುತ್ತಿಗೆದಾರರಿಂದ ರಾಜಧನದ ಶೇಕಡಾ 10 ರಷ್ಟು ಮತ್ತು 30 ರಷ್ಟು ಅನ್ವಯವಾಗುವಂತೆ ಜಿಲ್ಲಾ ಪ್ರತಿಷ್ಠಾನ ನಿಧಿಗೆ ಈವರೆಗೆ ವಂತಿಗೆ 1,928 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಾರತ ಸರ್ಕಾರದ ನಿರ್ದೇಶನದಂತೆ ಕೋವಿಡ್ – 19ಕ್ಕೆ ಸೋಂಕು ತಡೆಗಟ್ಟಲು ಈ ಮೊತ್ತವನ್ನು ವಿನಿಯೋಗಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ . ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ಅಂದಾಜು 45 ದಶಲಕ್ಷ ಮೆಟ್ರಿಕ್ ಮರಳಿನ ಬೇಡಿಕೆ ಇದ್ದು, 38 ದಶಲಕ್ಷ ಮಟ್ರಿಕ್ ಟನ್ ಪೂರೈಕೆ ಮಾಡಲಾಗುತ್ತಿದೆ. ಹೊಸ ಮರಳು ನೀತಿಯ ಅನುಷ್ಠಾನದಿಂದ ಸರ್ಕಾರಕ್ಕೆ ಹೆಚ್ಚಿನ ರಾಜಧನ ಸಂಗ್ರಹವಾಗಲಿದೆ ಎಂದು ಸಚಿವರು ತಿಳಿಸಿದರು.

ಕೆಎಂಎಂಸಿಆರ್ ನಿಯಮಾವಳಿಗಳ ತಿದ್ದುಪಡಿ ನಂತರ ಬಾಕಿ ಇರುವ ಅರ್ಹ ಅರ್ಜಿಗಳಿಗೆ ಗಣಿಗುತ್ತಿಗೆಗಳ ಮಂಜೂರಾತಿ ಮತ್ತು ಹರಾಜು ಮೂಲಕ ಕಟ್ಟಡಕಲ್ಲು ಗಣಿಗುತ್ತಿಗೆಗೆಗಳ ಮಂಜೂರಾತಿ ನೀಡಲಾಗುವುದು.

ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮ 2020ರ ಜಾರಿಗೊಳಿಸಲು ಕ್ರಮವಹಿಸಲಾಗುತ್ತಿದ್ದು, ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಮತ್ತು ಪರವಾನಗಿ ವಿತರಣಾ ನಿಯಮಗಳ ಸರಳೀಕರಣ ಹಾಗೂ ಉಪ ಖನಿಜಗಳ ಮೇಲಿನ ರಾಜಧನ ಪರಿಷ್ಕರಣೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com