ಕೊರೋನಾ: ಆಸ್ಪತ್ರೆಗೆ ತೆರಳುವ ವೇಳೆ ಜನಜಂಗುಳಿ, ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ದ ಎಫ್ಐಆರ್ ದಾಖಲು

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿದ ಹಿನ್ನೆಲೆಯಲ್ಲಿ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನಾ ಪಾಷಾ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 

Published: 31st May 2020 12:06 PM  |   Last Updated: 31st May 2020 12:06 PM   |  A+A-


imran pasha

ಇಮ್ರಾನ್ ಪಾಷಾ

Posted By : Manjula VN
Source : Online Desk

ಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿದ ಹಿನ್ನೆಲೆಯಲ್ಲಿ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನಾ ಪಾಷಾ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 

ಬಿಬಿಎಂಪಿ ಆರೋಗ್ಯಾಧಿಕಾರಿಗಳು ನೀಡಿದ ದೂರು ಆಧರಿಸಿ ಸಾಂಕ್ರಾಮಿಕ ರೋಗ ಹರಡಲು ಪ್ರಯತ್ನಿಸಿದ ಹಾಗೂ ಅಕ್ರಮವಾಗಿ ಗುಂಪು ಸೇರಿದ್ದ ಆರೋಪದಡಿ ಇಮ್ರಾನ್ ಪಾಷಾ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಇಮ್ರಾನ್ ಪಾಷಾ ಅವರಲ್ಲಿ ಕೊರೋನಾ ದೃಢಪಟ್ಟಿದೆ ಎಂಬ ವರದಿ ಬರುತ್ತಿದ್ದಂತೆಯೇ ಅವರನ್ನು ಆಸ್ಪತ್ರೆ ಕರೆದೊಯ್ಚಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಆ್ಯಂಬುಲೆನ್ಸ್ ಸಮೇತ ಮನೆಗೆ ಇಮ್ರಾನ್ ಮನೆಗೆ ತೆರಳಿದ್ದರು. ಈ ವೇಳೆ ಸ್ಥಳದಲ್ಲಿ ನೂರಾರು ಜನರು ಸೇರಿರುವುದು ಕಂಡು ಬಂದಿತ್ತು. ಕೊರೋನಾ ಇರುವುದು ದೃಢಪಟ್ಟಿದ್ದರೂ ಇಮ್ರಾನ್ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಓಡಾಡಿರುವುದು, ಅಧಿಕಾರಿಗಳು ಪೊಲೀಸರ ಆತಂಕಕ್ಕೆ ಕಾರಣವಾಗಿತ್ತು. ಅಲ್ಲದೆ, ಸ್ಥಳದಲ್ಲಿ ನೂರಾರು ಜನರು ನೆರೆದಿರುವ ನಡುವಲ್ಲೇ ಇಮ್ರಾನ್ ಅವರು ಆ್ಯಂಬುಲೆನ್ಸ್ ಏರಿದ್ದರು. 

Stay up to date on all the latest ರಾಜ್ಯ news
Poll
HD Kumaraswamy

ಹಿಂದಿ ಗೊತ್ತಿರುವುದರಿಂದ ರಾಷ್ಟ್ರ ರಾಜಕಾರಣದಲ್ಲಿ ಉತ್ತರ ಭಾರತದ ನಾಯಕರಿಗೆ ದಕ್ಷಿಣದವರಿಗಿಂತ ಹೆಚ್ಚಿನ ಪ್ರಯೋಜನ ಆಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp