ಲಾಕ್ ಡೌನ್ ಹಿನ್ನೆಲೆ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಸ್ಥಗಿತ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.
ಪೊಲೀಸ್ ಸಬ್ ಇನ್ಸ್ ಪೆಕ್ಟರ್
ಪೊಲೀಸ್ ಸಬ್ ಇನ್ಸ್ ಪೆಕ್ಟರ್

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 431 ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗಳು ಮತ್ತು ಕಲ್ಯಾಣ ಕರ್ನಾಟಕ ಭಾಗದ 125 ಪೊಲೀಸ್ ಸಬ್ ಇನ್ಸ್ ಪೆಕ್ಟ್ ರ್ ಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿತ್ತು.ಕೂಡಲೇ ಅರ್ಹ ಅಭ್ಯರ್ಥಿಳಿಂದ ಅರ್ಜಿ ಆಹ್ವಾನಿಸುವುದಾಗಿ ತಿಳಿಸಲಾಗಿತ್ತು. ಇದಕ್ಕಾಗಿ ಎಲ್ಲಾ ರೀತಿಯ ಸಿದ್ದತೆಗಳು ಸಹ ನಡೆಯುತ್ತಿತ್ತು.

  ಆದರೆ, ಅಂತಿಮವಾಗಿ ಗೃಹ ಸಚಿವಾಲಯ ಶನಿವಾರ ಬರೆದ ಪತ್ರದ ಆಧಾರದ ಮೇಲೆ  ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com