ಒಂದೇ ಕಡೆ ನೂರಾರೂ ಮೌಲ್ಯಮಾಪಕರ ಸೇರಿಸಿ, ಸರ್ಕಾರ ಅನಾಹುತ ಸೃಷ್ಟಿಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ

ಒಂದೇ ಕಡೆ ನೂರಾರೂ ಮೌಲ್ಯಮಾಪಕರ ಸೇರಿಸಿ, ಸರ್ಕಾರ ಅನಾಹುತ ಸೃಷ್ಟಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. 

Published: 31st May 2020 08:10 AM  |   Last Updated: 31st May 2020 08:10 AM   |  A+A-


HD Kumaraswamy

ಹೆಚ್.ಡಿ.ಕುಮಾರಸ್ವಾಮಿ

Posted By : Manjula VN
Source : The New Indian Express

ಬೆಂಗಳೂರು: ಒಂದೇ ಕಡೆ ನೂರಾರೂ ಮೌಲ್ಯಮಾಪಕರ ಸೇರಿಸಿ, ಸರ್ಕಾರ ಅನಾಹುತ ಸೃಷ್ಟಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. 

ಈ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಕೊರೋನಾ ಕಾರಣ ಮೌಲ್ಯಮಾಪನ ಕೇಂದ್ರಗಳಲ್ಲಿ ಭಾರೀ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಮೌಲ್ಯಮಾಪಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮನವಿ ಮಾಡಿಕೊಂಡಿದ್ದಾರೆ. 

ದ್ವಿತೀಯ ಪಿಯು ಮೌಲ್ಯಮಾಪನಕ್ಕೆ ಹಾಜರಾಗುವಂತೆ ಉಪನ್ಯಾಸಕರ ಮೇಲೆ ಒತ್ತಡ ತರುತ್ತಿರುವ ಇಲಾಖೆ ವಿರುದ್ಧ ಅಸಮಾದಾನ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಒಂದೇ ಕಡೆ ನೂರಾರು ಮೌಲ್ಯಮಾಪಕರು ಸೇರಿ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರಿಂದ ಮತ್ತೊಂದು ಭಾರೀ ಅನಾಹುತಕ್ಕೆ ಕಾರಣವಾಗಬಹುದು. ಈಗಾಗಲೇ ನಂಜನಗೂಡು, ತಬ್ಲಿಘಿಗಳಂತೆ ಇನ್ನೊಂದು ಪ್ರಕರಣವಾಗುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸೂಕ್ತ ಕ್ರಮಗಳನ್ನು ಅನುಸರಿಸಬೇಕಾಗಿದೆ. ಇಲ್ಲವಾದರೆ ಭಾರೀ ಪ್ರಮಾದಕ್ಕೆ ಸರ್ಕಾರಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp