ಕೇಂದ್ರ ಸರ್ಕಾರ ಮಾರ್ಗಸೂಚಿ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಪ್ರಕಟ: ಸಚಿವ ಸುರೇಶ್ ಕುಮಾರ್

ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯ ಮಾರ್ಗಸೂಚಿಗಳನ್ನು ನೀಡಿದ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್'ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ. 
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯ ಮಾರ್ಗಸೂಚಿಗಳನ್ನು ನೀಡಿದ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್'ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ. 

ಎಸ್ಎಸ್ಎಲ್'ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸುತ್ತಿದ್ದಂತೆಯೇ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ ಶಾಲೆಗಳು ಯಾವಾಗ ಪುನರಾರಂಭಗೊಳ್ಳುತ್ತದೆ ಎಂಬ ಪ್ರಶ್ನೆಗೆ ಮೌನತಾಳಿದ್ದಾರೆ. 

ಪಠ್ಯಕ್ರಮಗಳ ಗಾತ್ರ ಮತ್ತು ಶೈಕ್ಷಣಿಕ ವರ್ಷದ ಅವಧಿಯನ್ನು ರಾಜ್ಯದ ಅವಶ್ಯಕತೆಗಳಿಗನುಗುಣವಾಗಿ ನಿರ್ಧಾರ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. 

ಎಂಬಸ್ಸಿ ಗ್ರೂಪ್ ರೂ.75 ಲಕ್ಷ ಮೌಲ್ಯದ ಸ್ಯಾನಿಟೈಸರ್ ವಿತರಿಸಿದ್ದು, ಭರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶಿಕ್ಷಕರು ಮತ್ತು ಕೆಡೆಟ್‌ಗಳು ಕೈಯಿಂದ ಹೊಲಿದು ತಯಾರಿಸಿದ ಮಾಸ್ಕ್ ಗಳನ್ನು ವಿತರಿಸಿದ್ದಾರೆ. 

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧಿಯಾ ಮಾತನಾಡಿ, ಇಂತಹ ಸಾಂಕ್ರಾಮಿಕ ಸಮಯದಲ್ಲಿ ಸಹಾಯ ಮಾಡಲು ಬಹಳ ಸಂತೋಷವಾಗುತ್ತಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com