ಕೆಎಂಎಫ್ ನಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅರಿಶಿಣ ಮಿಶ್ರಿತ ಹಾಲು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾ ಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾ ಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ ಎಂಬ ಕಾರಣಕ್ಕೆ ಕೆಎಂಎಫ್ ಅರಿಸಿನಯುಕ್ತ ಹಾಲನ್ನು ಬಿಡುಗಡೆಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬೆಂಗಳೂರ ನಗರದಲ್ಲಿ ಕೆಎಂಎಫ್ ನ ನಾನಾ ಶ್ರೇಣಿಯ ನಂದಿನಿ ಉತ್ಪಾದನೆಯ ಮೋಬೈಲ್ ಪಾರ್ಲರ್ ವ್ಯಾನ್ ಗಳನ್ನು ಲೋಕಾರ್ಪನೆಗೊಳಿಸಲಾಗುತ್ತಿದೆ. ಇಲ್ಲಿ ಕೆಎಂಎಫ್ ತಯಾರಿಸುತ್ತಿರುವ ನಂದಿನಿ ಹಾಲು, ಮೊಸಲು, ಐಸ್ ಸ್ಕ್ರೀಮ್, ಗಟ್ಟಿ ಹಾಲು ಸೇರಿದಂತೆ ಇತರೇ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com