ಸಂಪತ್ ರಾಜ್ ನಾಪತ್ತೆ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು
ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಸಿಬಿ ಪೊಲೀಸರು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
Published: 02nd November 2020 01:01 PM | Last Updated: 02nd November 2020 01:50 PM | A+A A-

ಮಾಜಿ ಮೇಯರ್ ಸಂಪತ್ ರಾಜ್
ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಸಿಬಿ ಪೊಲೀಸರು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಮಾಜಿ ಮೇಯರ್ ಸಂಪತ್ ರಾಜ್ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಪರಾರಿಯಾಗಲು ನೆರವು ನೀಡಿದ ಶಂಕೆಯ ಮೇರೆಗೆ ಸಿಸಿಬಿ ಅಧಿಕಾರಿಗಳು ಆಸ್ಪತ್ರೆ ವೈದ್ಯರು ಮತ್ತು ಇತರೆ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿ ಅವರು ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ತಮಗೆ ಕೊರೊನಾ ಸೋಂಕು ಇದೆ ಎಂದು ಸಮಜಾಯಿಷಿ ನೀಡಿ ಸಂಪತ್ ರಾಜ್ ಅವರುಈ ಹಿಂದೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಸಿಸಿಬಿ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಸಂಪತ್ ರಾಜ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಮುನ್ನ ತಮಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದರು. ಆದರೆ, ಸಂಪತ್ ರಾಜ್ ಕಳದೆ 29ರಂದು ರಾತ್ರೋರಾತ್ರಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ನಾಪತ್ತೆಯಾಗಿದ್ದರು.
ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರುಗಳಿಗೆಲ್ಲ ಸಿಸಿಬಿ ನೋಟಿಸ್ ನೀಡಿತ್ತು.
ಸ್ಪಷ್ಟನೆ ನೀಡಲಿರುವ ಆಸ್ಪತ್ರೆಯ ಆಡಳಿತ ಮಂಡಳಿ
ಅದರಂತೆ ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿಯವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಡಿಸ್ಚಾರ್ಜ್ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರೂ ಬ್ಯಾಪ್ಟಿಸ್ಟ್ ಆಸ್ಪತ್ರೆ ನಿರ್ಲಕ್ಷ್ಯ ವಹಿಸಿದರು ಎಂದು ತಿಳಿದುಬಂದಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಅಸ್ಪತ್ರೆಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಅಸ್ಪತ್ರೆಯ ಆರು ಮಂದಿ ವಿಚಾರಣೆಗೆ ಹಾಜರಾಗಿದ್ದಾರೆ.