ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ
ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಕೈಲಾಸ ನಗರ ಬಡಾವಣೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
Published: 03rd November 2020 10:40 AM | Last Updated: 03rd November 2020 10:40 AM | A+A A-

ಸಾಂದರ್ಭಿಕ ಚಿತ್ರ
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಕೈಲಾಸ ನಗರ ಬಡಾವಣೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಡಗಂಚಿ ಗ್ರಾಮ ಪಂಚಾಯತಿ ಸದಸ್ಯ ಶಿವಲಿಂಗಪ್ಪ ಭೋಗಶೆಟ್ಟಿ (50) ಹತ್ಯೆಗೀಡಾದವರು. ಕೊಲೆಯಾದವರು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯತಿ ಸದಸ್ಯ ಆಗಿದ್ದರು ಎಂದು ತಿಳಿದು ಬಂದಿದೆ.
ಕಳೆದ ರಾತ್ರಿ ಮನೆ ಬಳಿ ನಿಂತಿದ್ದ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.