ಶಾಲೆ ಪುನರಾರಂಭ ಕುರಿತು ಅಧಿಕಾರಿಗಳೊಂದಿಗೆ ಸುರೇಶ್‌ ಕುಮಾರ್‌ ಸಭೆ, ನ. 6ಕ್ಕೆ ಅಂತಿಮ ನಿರ್ಧಾರ

ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ನ.4ರಿಂದ 6ರವರೆಗೆ ಸಭೆ ನಡೆಸಲಿದ್ದು, 6 ರಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ನ.4ರಿಂದ 6ರವರೆಗೆ ಸಭೆ ನಡೆಸಲಿದ್ದು, 6 ರಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಕೂಡ ಚರ್ಚೆ ನಡೆಸಲಾಗುವುದು ಎಂದು
ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

, ಶಾಲೆಗಳ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ. ಇದರೊಂದಿಗೆ ಶಾಲಾ ಕಟ್ಟಡ ಹಾಗೂ ಕೋಣೆಗಳ ದುರಸ್ತಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಸಿದ್ಧತೆಗಳ ಬಗ್ಗೆಯೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದರು.

‘ಆಂಧ್ರದಲ್ಲಿ ಈಗಾಗಲೇ ಶಾಲೆಗಳನ್ನು ಪುನರಾರಂಭಸಲಾಗಿದೆ. ರಾಜ್ಯ ಸರ್ಕಾರವೂ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನವೆಂಬರ್ ಕೊನೆ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ಹಂತ–ಹಂತವಾಗಿ ಶಾಲೆಗಳನ್ನು ಆರಂಭಿಸುವ ಚಿಂತನೆ ಇದೆ’ ಎಂದು ಮೂಲಗಳು ತಿಳಿಸಿವೆ.

ಇಲಾಖೆಯ ಉಪನಿರ್ದೇಶಕರೊಂದಿಗೆ ಸೋಮವಾರ ವಿಡಿಯೋ ಸಂವಾದ ಏರ್ಪಡಿಸಲಾಗಿತ್ತು. ತಾಂತ್ರಿಕ ದೋಷದಿಂದ ಸಭೆ ನಡೆಯಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com