ಎಂಎಲ್'ಸಿ ಫಲಿತಾಂಶ ಮುಂದೂಡಿಕೆ ಪ್ರಶ್ನಿಸಿ ಅರ್ಜಿ

ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್'ಗೆ ನಡೆದ ಚುನಾವಣೆಯ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆ ದಿನಾಂಕ ಮುಂದೂಡಿರುವ ಕ್ರಮ ಹೈಕೋರ್ಟ್'ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.  
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್'ಗೆ ನಡೆದ ಚುನಾವಣೆಯ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆ ದಿನಾಂಕ ಮುಂದೂಡಿರುವ ಕ್ರಮ ಹೈಕೋರ್ಟ್'ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. 

ಈ ಕುರಿತು ದಿ ನ್ಯೂಸ್ ಇಂಡಿಯಾ ವೋಟರ್ಸ್ ಫೋರಂ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳಾದ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ, ಚುನಾವಣಾಧಿಕಾರಿ ಮತ್ತು ಸರ್ಕಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು. 

ಆಗ್ನೇಯ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರಗಳು, ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನವೆಂಬರ್‌ 2ರಂದು ಮತ ಎಣಿಕೆ ನಿಗದಿಯಾಗಿತ್ತು. ಅದನ್ನು ನ. 10ಕ್ಕೆ ಮುಂದೂಡಿ ಕೇಂದ್ರ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com