ರಾಜ್ಯದ ಜನತೆಗೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಉಪ ಚುನಾವಣೆ ಮುಗಿಯುತ್ತಿದ್ದಂತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್​ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.

Published: 04th November 2020 05:54 PM  |   Last Updated: 04th November 2020 07:07 PM   |  A+A-


Expect 24 hours power supply by next year: Managing Director, Bangalore Electricity Supply Company

ಸಾಂದರ್ಭಿಕ ಚಿತ್ರ

Posted By : Lingaraj Badiger
Source : Online Desk

ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್​ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 40 ಪೈಸೆ ಹೆಚ್ಚಿಸಿದ್ದು, ನವೆಂಬರ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.

ಕಳೆದ ಮಾರ್ಚ್ ನಿಂದಲೇ ದರ ಹೆಚ್ಚಳವಾಗಬೇಕಿತ್ತು. ಆದರೆ ಕೊರೋನಾ ಮತ್ತು ಆರ್ ಆರ್ ನಗರ, ಶಿರಾ ಉಪ ಚುನಾವಣೆ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಹೆಚ್ಚಳ ಪ್ರಸ್ತಾವಕ್ಕೆ ಸರ್ಕಾರ ಇಂದು ಒಪ್ಪಿಗೆ ಸೂಚಿಸಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ 40 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp