ರಾಜ್ಯದಲ್ಲಿ ಈಗಾಗಲೇ ಸುಮಾರು 2 ಕೋಟಿ ಜನರಿಗೆ ಕೊರೋನಾ ಸೋಂಕು ತಗುಲಿದೆ: ಸರ್ಕಾರದ ಸಮೀಕ್ಷೆ 

ರಾಜ್ಯದಲ್ಲಿ ಈಗಾಗಲೇ ಮಹಾಮಾರಿ ಕೊರೋನಾ ವೈರಸ್ ಸುಮಾರು 2 ಕೋಟಿ ಜನರಿಗೆ ತಗುಲಿದೆ ಎಂಬುದು ಕರ್ನಾಟಕ ಸರ್ಕಾರ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮಹಾಮಾರಿ ಕೊರೋನಾ ವೈರಸ್ ಸುಮಾರು 2 ಕೋಟಿ ಜನರಿಗೆ ತಗುಲಿದೆ ಎಂಬುದು ಕರ್ನಾಟಕ ಸರ್ಕಾರ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ.

ಕರ್ನಾಟಕದಲ್ಲಿ ಸೆಪ್ಟೆಂಬರ್ 16 ರ ವೇಳೆ ಕನಿಷ್ಠ 1.93 ಕೋಟಿ ಅಥವಾ ಶೇಕಡಾ 27.3 ರಷ್ಟು ಜನರು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಅಥವಾ ಈಗಾಗಲೇ ಬಂದು ಹೋಗಿದೆ ಎಂಬುದು ರಾಜ್ಯದಲ್ಲಿ ಕೋವಿಡ್-19 ಹರಡುವಿಕೆಯನ್ನು ಅಂದಾಜು ಮಾಡಲು ಸರ್ಕಾರ ನಡೆಸಿದ ಸಮೀಕ್ಷೆ ಬಹಿರಂಗಪಡಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಸಮೀಕ್ಷೆಯ ವಿವರ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು, ಈ ಸರ್ವೆ 2020ರ ಸೆಪ್ಟೆಂಬರ್ 3 ರಿಂದ 16 ರವರೆಗೆ ನಡೆದಿದೆ. ಕೋವಿಡ್ ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ. ರಾಜ್ಯದಲ್ಲಿ ಮರಣ ಪ್ರಮಾಣ 0.05% ಇದೆ. ಮುಂಬೈಯಲ್ಲಿ 0.05-0.10%, ಪುಣೆಯಲ್ಲಿ 0.08%, ದೆಹಲಿಯಲ್ಲಿ 0.09%, ಚೆನ್ನೈನಲ್ಲಿ 0.13% ಮರಣ ಪ್ರಮಾಣವಿದೆ ಎಂದು ವಿವರಿಸಿದರು.

"ಜಿಲ್ಲೆಗಳಲ್ಲಿ ಸಮುದಾಯದಲ್ಲಿ ಕೊರೋನಾ ಹೇಗೆ ಹರಡುತ್ತಿದೆ, ಅದರ ಹರಡುವಿಕೆಯನ್ನು ಹೇಗೆ ತಡೆಯುವುದು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರವು ಸ್ಪಷ್ಟವಾದ ಮಾಹಿತಿಯನ್ನು ಪಡೆಯಲು ಈ ಸಮೀಕ್ಷೆ ನಡೆಸಲಾಗಿದೆ ಎಂದರು.

ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com