ಆನ್'ಲೈನ್'ನಲ್ಲಿ ರೇಸ್ ಬೆಟ್ಟಿಂಗ್: ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್ 

ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ಅನುಮತಿ ನೀಡಿರುವ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ಅನುಮತಿ ನೀಡಿರುವ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರಿನ ಶಾಂತಿ ನಗರದ ನಿವಾಸಿಯಾದ ಸಿ.ಗೋಪಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಟರ್ಫ್ ಕ್ಲಬ್'ಗೆ ನೋಟಿಸ್ ಜಾರಿ ಮಾಡಿತು. 

ಅಲ್ಲದೆ, ಆನ್'ಲೈನ್ ಮೂಲಕ ಬೆಟ್ಟಿಂಗ್ ನಡೆಸಲು ಅನುಮತಿ ನೀಡಲು ಸರ್ಕಾರಕ್ಕೆ ಅಧಿಕಾರವಿದೆಯೇ ಎಂಬ ಬಗ್ಗೆ ನ.20ರೊಳಗೆ ಮಾಹಿತಿಯನ್ನು ನೀಡುವಂತೆ ಸರ್ಕಾರಕ್ಕೆ ಸೂಚಿಸಿತು. 

ಅರ್ಜಿದಾರರ ಪರ ವಕೀಲರು, ಆನ್'ಲೈನ್ ಬೆಟ್ಟಿಂಗ್ ನಡೆಸಲು ಕ್ಲಬ್'ಗೆ ಸರ್ಕಾರ ಅನುಮತಿ ನೀಡಿದೆ. ನಿಯಮ ಪಾಲಿಸದೆ ಅನುಮತಿ ಸರಿಯಲ್ಲ. ಇದು ಸಮಾಜಕ್ಕೆ ಮಾರಕವಾಗಿದ್ದು, ಜನರು ಕಷ್ಟಪಟ್ಟು ದುಡಿದ ಹಣವನ್ನು ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಕೂಡಲೇ ಅನುಮತಿಯನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಕೋರಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com