ದೃಷ್ಟಿ ದೋಷವುಳ್ಳ ಮಕ್ಕಳಿಗೆ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಮಾಡದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ದೃಷ್ಟಿ ದೋಷವುಳ್ಳ ಮಕ್ಕಳಿಗೆ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಮಾಡದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ದೃಷ್ಟಿ ದೋಷವುಳ್ಳ ಮಕ್ಕಳಿಗೆ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಮಾಡದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ದೃಷ್ಟಿ ದೋಷವುಳ್ಳ ಮಕ್ಕಳಿಗೆ ಉಚಿತವಾಗಿ ಟಾಕಿಂಗ್ ಲ್ಯಾಪ್'ಟಾಪ್'ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಈ ಹಿಂದೆ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಈ ಯೋಜನೆ ಇನ್ನೂ ಜಾರಿಯಾಗಿಲ್ಲ. ಹೀಗಾಗಿ ಹೈಕೋರ್ಟ್'ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. 

ಈ ಅರ್ಜಿಗಳನ್ನು ಪರಿಶೀಲನೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಹಾಗೂ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಟಾಕಿಂಗ್ ಲ್ಯಾಪ್'ಟಾಪ್ ವಿತರಣೆಗೆ ಸರ್ಕಾರ ಪ್ರತೀವರ್ಷ 4 ಕೋಟಿ ಬಿಡುಗಡೆ ಮಾಡುತ್ತಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಈ ಅನುದಾನವನ್ನು ಕಡಿಮೆ ಮಾಡಿದೆ. 2014-17 ಶೈಕ್ಷಣಿಕ ವರ್ಷದಲ್ಲಿ ಲ್ಯಾಪ್'ಟಾಪ್'ಗಳನ್ನು ವಿತರಣೆ ಮಾಡಲಾಗಿತ್ತು. ಆದರೆ, 2018-19 ಹಾಗೂ 2019-20ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿತರಣೆ ಮಾಡಿಲ್ಲ. ಇದಕ್ಕಾಗಿ ರೂ.3.50 ಕೋಟಿ ಹಾಗೂ 2.14 ಕೋಟಿ ಬಿಡುಗಡೆಯಾಗಬೇಕಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com