ಬೆಂಗಳೂರು: ಡ್ರಗ್ಸ್ ಪೆಡ್ಲರ್ ಸಿಸಿಬಿ ವಶಕ್ಕೆ, 500 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ

ಮಾದಕ ಜಾಲದ ವಿರುದ್ಧ ಸಮರ ಸಾರುತ್ತಿರುವ ಸಿಸಿಬಿ ಪೊಲೀಸರು ಮತ್ತೋರ್ವ ಡ್ರಗ್ಸ್ ಪೆಡ್ಲರ್ ಅನ್ನು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾದಕ ಜಾಲದ ವಿರುದ್ಧ ಸಮರ ಸಾರುತ್ತಿರುವ ಸಿಸಿಬಿ ಪೊಲೀಸರು ಮತ್ತೋರ್ವ ಡ್ರಗ್ಸ್ ಪೆಡ್ಲರ್ ಅನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಜಯ್ ಎಂದು ಗುರ್ತಿಸಲಾಗಿದೆ. ಈತ ವಿದೇಶದಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಬಿಟ್ ಕಾಯಿನ್ ಮೂಲಕ ಹಣ ಪಾವತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. 

ನಗರದ ಕಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಆರೋಪಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಆರೋಪಿ ಸುಜಯ್ ನಿಂದ ಸಿಸಿಬಿ ಪೊಲೀಸರು 500 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com