ಹುಟ್ಟುಹಬ್ಬದ ಶುಭ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಕಸ್ಟಡಿಗೆ ಪಡೆದ ಸಿಬಿಐ

ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.
ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ

ಬೆಳಗಾವಿ: ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ನಿನ್ನೆ ಆದೇಶ ನೀಡಿತ್ತು. ಇದೀಗ ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ಹುಬ್ಬಳ್ಳಿಯ ಗೋಕುಲ್ ರಸ್ತೆ ಬಳಿಯಿರುವ ಹೊಸ ಸಿಎಆರ್ ಮೈದಾನಕ್ಕೆ ಕರೆತಂದಿದ್ದಾರೆಂದು ಹೇಳಲಾಗುತ್ತಿದೆ. 

ವಿನಯ್ ಅವರನ್ನು ಐವರು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಳಿಗ್ಗೆ 9.30ರ ವೇಳೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ. ವಿನಯ್ ಕುಲಕರ್ಣಿಯವರ ಜನ್ಮದಿನವಾಗಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳೂ ಮೈದಾನಕ್ಕೆ ಆಗಮಿಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಇದೀಗ ಮೈದಾನದ ಸುತ್ತಲೂ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಸಂಜೆ ವೇಳೆಗೆ ಧಾರವಾಡಕ್ಕೆ ಕರೆದೊಯ್ಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 

ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಹಿಂಡಲಗಾ ಕಾರಾಗೃಹದಲ್ಲಿರಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com