ಕುಖ್ಯಾತ ಕಳ್ಳನ ಬಂಧನ; 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಕುಖ್ಯಾತ ಮನೆಗಳ್ಳನೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 30 ಲಕ್ಷ ರೂ.ಬೆಲೆಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕುಖ್ಯಾತ ಮನೆಗಳ್ಳನೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 30 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಅಬ್ದುಲ್ ಸುಲೇಮಾನ್ ಅಲಿಯಾಸ್ ರಿಹಾನ್ (26) ಬಂಧಿತ ಆರೋಪಿ. ಆತನಿಂದ 30 ಲಕ್ಷ ರೂ.ಮೌಲ್ಯದ 521 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸ ರೆಡ್ಡಿ ಎಂಬವರ ಮನೆಯಲ್ಲಿ ಇದೇ ವರ್ಷದ ಮೇ 26ರಂದು ಕಳ್ಳರು ಮನೆಯ ಬೀಗ ಮುರಿದು ಮನೆಯಲ್ಲಿದ್ದ 355 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿದ್ದರು. ಈ ಬಗ್ಗ ರೆಡ್ಡಿ ಅವರು ಕಾಡುಗೋಡು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದರು.

ಆರೋಪಿಯ ವಿರುದ್ಧ ಉಪ್ಪಾರಪೇಟೆ, ಮಲ್ಲೇಶ್ವರಂ, ಜಯನಗರ, ಸಂಪಿಗೆಹಳ್ಳಿ, ಬಿಡದಿ ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ದರೋಡೆ, ದರೋಡೆ ಯತ್ನದ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ ಸಂಘಟಿತ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿ ಯಶಸ್ವಿಯಾಗಿ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com