ಮಾಜಿ ಸಚಿವೆ ಉಮಾಶ್ರೀ ಮನೆ ಕಳವು: ಇಬ್ಬರು ಆರೋಪಿಗಳ ಬಂಧನ

ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ನಡೆದ ಕಳವು ಪ್ರಕರಣ ಸಂಬಂಧ ತೇರದಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಉಮಾಶ್ರೀ ಮನೆ
ಉಮಾಶ್ರೀ ಮನೆ

ಬಾಗಲಕೋಟೆ: ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ನಡೆದ ಕಳವು ಪ್ರಕರಣ ಸಂಬಂಧ ತೇರದಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜಮಖಂಡಿಯ ಯಲ್ಲಪ್ಪ ಗಡ್ಡಿ ಹಾಗೂ ಹಾಗೂ ಮುಧೋಳದ ದುರ್ಗಪ್ಪ ವಾಲ್ಮೀಕಿ ಬಂಧಿತ ಆರೋಪಿಗಳಾಗಿದ್ದಾರೆ.

ನಗರದ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀಯವರ ನಿವಾಸದಲ್ಲಿ ನವೆಂಬರ್ 2 ರಂದು ಕಳ್ಳತನವಾಗಿತ್ತು. ಮಾಜಿ ಸಚಿವೆ ಮನೆಯಲ್ಲಿದ್ದ 2 ಲಕ್ಷ ರೂಪಾಯಿ ನಗದು ಎಗರಿಸಿ ಪರಾರಿಯಾಗಿದ್ದರು. ಈ ಬಗ್ಗೆ ತೇರದಾಳ ಪೊಲೀಸ್ ಠಾಣೆಗೆ ಉಮಾಶ್ರೀ ದೂರು ಕೊಟ್ಟಿದ್ದರು.

ಸದ್ಯ, ಬಂಧಿತರಿಂದ 1.94 ಲಕ್ಷ ರೂಪಾಯಿಯನ್ನು ತೇರದಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರಲ್ಲಿ ಓರ್ವ ಬಂಧಿತ ಆರೋಪಿ ಯಲ್ಲಪ್ಪ ಗಡ್ಡಿ ಕುಖ್ಯಾತ ಕಳ್ಳನೆಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com