ರಾಜ್ಯದ 4 ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕ ಮಾಡಿ ಸರ್ಕಾರ ಆದೇಶ

ಕರ್ನಾಟಕ ಸರ್ಕಾರ ರಾಜ್ಯದ ನಾಲ್ಕು ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಿದೆ.
ರಾಜ್ಯದ 4 ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದ ನಾಲ್ಕು ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಿದೆ.

ಶನಿವಾರ ರಾತ್ರಿ ಹೊರಡಿಸಿದ ಆದೇಶದಲ್ಲಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಮೊದಲ ಉಪಕುಲಪತಿಯಾಗಿ ಬೆಂಗಳೂರು ವಿಶ್ವವಿದ್ಯಾಲಯದ ಎಲ್ ಗೋಮತಿ ದೇವಿ ಅವರನ್ನು ನೇಮಿಸಲಾಗಿದೆ.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹರೀಶ್ ರಾಮಸ್ವಾಮಿ ಅವರನ್ನು ರಾಯಚೂರು ವಿಶ್ವವಿದ್ಯಾಲಯದ ಮೊದಲ ಉಪಕುಲಪತಿಗಳನ್ನಾಗಿನೇಮಕ ಮಾಡಲಾಗಿದ್ದು, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಜಿ.ಕೋಟ್ರೇಶ್ವರ್ ಅವರನ್ನು ರಾಯಚೂರು ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿಯಾಗಿ ನೇಮಿಸಲಾಗಿದೆ.

ಬಾಗಲಕೋಟೆ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ (ಸ್ವಾಯತ್ತ) ಪ್ರಾಧ್ಯಾಪಕ ಶ್ರೀನಿವಾಸ್ ಎಸ್ ಬಲ್ಲಿ ಅವರನ್ನು ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ

ಬೆಂಗಳೂರಿನ ಎಸ್‌ಜೆಬಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಶುಪಾಲರಾದ ಪುಟ್ಟರಾಜು ಮಂಡ್ಯ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಕವಾಗಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com