ಮುಜರಾಯಿ ಇಲಾಖೆ ದೇವಾಲಯಗಳ ಅರ್ಚಕರು, ಸಿಬ್ಬಂದಿಗಳಿಗೆ ಶೀಘ್ರದಲ್ಲೇ ವಿಮಾ ಸೌಲಭ್ಯ!

ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ಪಿಂಚಣಿ, ವಿಮಾ ಸೌಲಭ್ಯಗಳನ್ನು ನೀಡಲು ಸರ್ಕಾರ ಮುಂದಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ಪಿಂಚಣಿ, ವಿಮಾ ಸೌಲಭ್ಯಗಳನ್ನು ನೀಡಲು ಸರ್ಕಾರ ಮುಂದಾಗಿದೆ. 

ರಾಜ್ಯದ ಸುಮಾರು 34,559 ದೇವಾಲಯಗಳು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರಲಿದ್ದು, ಈ ಎಲ್ಲಾ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ಪಿಂಚಣಿ, ಆರೋಗ್ಯ ವಿಮೆ, ಜೀವ ವಿಮೆಯಂತಹ ಸೌಲಭ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. 

ರಾಜ್ಯದಲ್ಲಿನ 34,559 ದೇವಾಲಯಗಳು ಮುಜರಾಯಿ ಇಲಾಖೆಯಡಿ ಬರಲಿದ್ದು ಅವುಗಳಲ್ಲಿ 175 ವರ್ಗ-ಎ (ವಾರ್ಷಿಕ 25 ಲಕ್ಷ ರೂ. ಆದಾಯದೊಂದಿಗೆ), 163 ವರ್ಗ-ಬಿ (ವಾರ್ಷಿಕ ಆದಾಯ 5-25 ಲಕ್ಷ ರೂ.) ಮತ್ತು 34,221 ಗಳು ವರ್ಗ-ಸಿ (ವಾರ್ಷಿಕ ಆದಾಯ 5 ಲಕ್ಷ ರೂ.ಗಿಂತ ಕಡಿಮೆ) ದೇವಾಲಯಗಳಾಗಿದೆ,

ಈ ದೇವಾಲಯಗಳಲ್ಲಿ ಸುಮಾರು 50,000 ಪ್ರಧಾನ  ಅರ್ಚಕರು, ಗ್ರೂಪ್ ಸಿ ಮತ್ತು ಡಿ ನೌಕರರು ಕೆಲಸ ಮಾಡುತ್ತಾರೆ, ಆದರೆ ಅವರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲಾಗುವುದಿಲ್ಲ. ಅವರ ವೇತನವನ್ನು ಆಯಾ ದೇವಾಲಯದ ಟ್ರಸ್ಟ್‌ಗಳು ಪಾವತಿಸುತ್ತವೆ. 

ಇದುವರೆಗೂ ಅರ್ಚಕರು ಸೇರಿದಂತೆ ದೇವಾಲಯದ ಸಿಬ್ಬಂದಿಗೆ ಆರೋಗ್ಯ ವಿಮೆ ಅಥವಾ ನೌಕರರ ರಾಜ್ಯ ವಿಮೆ ಅಥವಾ ಭವಿಷ್ಯ ನಿಧಿಯಂತಹ ಇತರ ಸೌಲಭ್ಯಗಳು ಇರಲಿಲ್ಲ. ಇದೀಗ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ರೂ.5 ಲಕ್ಷ ಆರೋಗ್ಯ ವಿಮೆ ನೀಡಲು ನಿರ್ಧರಿಸಲಾಗಿದ್ದು, ಅರ್ಚಕರು ಹಾಗೂ ಸಿಬ್ಬಂದಿಗಳ ಕುಟುಂಬಗಳಿಗೂ ವಿಮಾ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಈ ತಿಂಗಳ ಅಂತ್ಯದ ವೇಳೆಗೆ ಸರ್ಕಾರ ಈ ಯೋಜನೆಯನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಇದಕ್ಕಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ದೇವಾಲಯದ ಸಿಬ್ಬಂದಿಯ ಆರೋಗ್ಯ ಮತ್ತು ಸಾವಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸಮೀಕ್ಷೆಯ ವರದಿಯ ಆಧಾರದ ಮೇಲೆ ವಿಮಾ ಸ್ವರೂಪವನ್ನು ವಿನ್ಯಾಸಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com