ಆರ್.ಆರ್.ನಗರ ಉಪಚುನಾವಣೆ: ಮುನಿರತ್ನ ಹ್ಯಾಟ್ರಿಕ್ ಗೆಲುವು ಬಹುತೇಕ ಖಚಿತ; ಘೋಷಣೆಯಷ್ಟೇ ಬಾಕಿ

ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ ವಿರುದ್ಧ ಭಾರೀ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿದೆ. 
ಮುನಿರತ್ನ (ಸಂಗ್ರಹ ಚಿತ್ರ)
ಮುನಿರತ್ನ (ಸಂಗ್ರಹ ಚಿತ್ರ)

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ ವಿರುದ್ಧ ಭಾರೀ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿದೆ. 

ರಾಜರಾಜೇಶ್ವರಿ ನಗರದ 20ನೇ ಸುತ್ತಿನ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 103291 ಮತಗಳನ್ನು ಪಡೆದು ನಿರಂತರ ಮುನ್ನಡೆ ಕಾಯ್ದು ಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 58,743 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿಯವರು 7772 ಮತಗಳನ್ನು ಪಡೆದಿದ್ದಾರೆ. ಮುನಿರತ್ನ ಅವರು 44,548 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ. 

ಮುನಿರತ್ನ ಅವರ ಅಂತರ 44 ಸಾವಿರ ದಾಟಿದ್ದು, ಇನ್ನು 5 ಸುತ್ತುಗಳ ಮತ ಎಣಿಕೆ ಮಾತ್ರ ಬಾಕಿ ಇದೆ. ಆದರೆ, ಮುನಿರತ್ನ ಅವರು ಸಾಧಿಸಿರುವ ಭಾರೀ ಮುನ್ನಡೆಯು ಇನ್ನು ಬಾಕಿ ಉಳಿದಿರುವ ಐದು ಸುತ್ತುಗಳಲ್ಲಿ ಕುಸುಮಾ ಅವರು ಮೀರಿಸಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಎಲ್ಲಾ ಸುತ್ತುಗಳ ಮತ ಎಣಿಕೆ ಪೂರ್ಣಗೊಂಡು ಬಹುಮತದ ಅಂತರವಷ್ಟೇ ನಿರ್ಧಾರವಾಗಬೇಕಿದೆ. ಬಳಿಕ ಚುನಾವಣಾ ಆಯೋಗವು ಮುನಿರತ್ನ ಅವರ ಗೆಲುವನ್ನು ಅಧಿಕೃತವಾಗಿ ಘೋಷಣೆ ಮಾಡಲಿದೆ. 

ಆರಂಭದಿಂದಲು ಮುನಿರತ್ನ ಅವರು ಮುನ್ನಡೆ ಸಾಧಿಸಿಕೊಂಡು ಬಂದಿದ್ದು, ಈ ಮುನ್ನಡೆಯನ್ನು ನಿರಂತರವಾಗಿ ಕಾದುಕೊಂಡು ಬಂದಿರುವ ಪರಿಣಾಮ ಇದೇ ಮೊದಲ ಬಾರಿಗೆ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಜಯಗಳಿಸುತ್ತಿದೆ. 

ಬಿಜೆಪಿ ಮತ್ತು ಕಾಂಗ್ರೆಸ್‌ನ ಅಬ್ಬರದ ಪ್ರಚಾರ, ಆರೋಪ– ಪ್ರತ್ಯಾರೋಪ, ಜಾತಿ– ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ಅಲ್ಲದೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ನಡೆಯಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ, ಮತದಾರ ಬಿಜೆಪಿ ‘ಕೈ’ ಹಿಡಿದಿರುವುದು ಬಹುತೇಕ ಸ್ಪಷ್ಟವಾಗಿದೆ. ಬಿಜೆಪಿ ನಾಯಕರ ನಿರೀಕ್ಷೆಗೂ ಮೀರಿ ಮತದಾರರರು ಮುನಿರತ್ನ ಅವರನ್ನು ಬೆಂಬಲಿಸಿರುವುದು ಇತ್ತೀಚಿನ ಬೆಳವಣಿಗೆಗಳಲ್ಲಿ ತಿಳಿದುಬರುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com