ವಿದ್ಯುತ್ ದರ ಏರಿಕೆ; ಪ್ರತಿಭಟನೆ ಹಮ್ಮಿಕೊಳ್ಳಲು ಕೆಪಿಸಿಸಿಯಿಂದ ಕರೆ

ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಪಕ್ಷದ ಎಲ್ಲ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಪಕ್ಷದ ಎಲ್ಲ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಸೂಚನೆ ನೀಡಿದೆ.

ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಪತ್ರ ಬರೆದಿದ್ದು, ನವೆಂಬರ್ 17 ರಿಂದ ನವೆಂಬರ್ 20 ರವರೆಗೆ ಯಾವುದಾದರೂ ಒಂದು ದಿನ ಹಾಗೂ ನವೆಂಬರ್ 23 ರಿಂದ 28 ರ ವರೆಗೆ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಪ್ರತಿಭಟನಾ ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದ್ದವರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪತ್ರದಲ್ಲಿ ಸೂಚಿಸಲಾಗಿದೆ. ಅಲ್ಲದೇ ಪ್ರತಿಭಟನೆ ನಂತರ ತಹಸೀಲ್ದಾರ್ ಹಾಗೂ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವಂತೆ ಸೂಚಿಸಲಾದೆ. ಪ್ರತಿಭಟನಾ ಸಂದರ್ಭದಲ್ಲಿ ಜನರಿಗೆ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ವಿಡಿಯೊ ತುಣುಕುಗಳನ್ನು ಬಳಸುವುದು, ಸಾಮಾಜಿಕ ಜಾಲ ತಾಣದ ಮೂಲಕ ಹೆಚ್ಚು ಹಂಚಿಕೆ ಮಾಡುವಂತೆ ಸೂಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com