ಬಿಬಿಎಂಪಿ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ ಖಚಿತ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ

ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುವುದು ಖಚಿತ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬುಧವಾರ ಹೇಳಿದ್ದಾರೆ.
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

ಬೆಂಗಳೂರು: ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುವುದು ಖಚಿತ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬುಧವಾರ ಹೇಳಿದ್ದಾರೆ.

ಇಂದು ಬೆಂಗಳೂರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ಆಮ್ ಆದ್ಮಿ ಪಕ್ಷ ಶಿಕ್ಷಣ ಮತ್ತು ಆರೋಗ್ಯ ವಿಷಯವನ್ನು ಮುಂದಿಟ್ಟುಕೊಂಡು ಬಿಬಿಎಂಪಿ ಚುನಾವಣೆ ಎದುರಿಸಲಿದೆ. ಸರ್ಕಾರದ ಕೆಲಸ ಜನರಿಂದ ಹಣ ಪಡೆಯುವುದಲ್ಲ. ಜನರಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ನೀಡುವುದು ಸರ್ಕಾರದ ಕೆಲಸ ಎಂದರು.

ದೆಹಲಿಯ ಮೊಹಲ್ಲಾ ಕ್ಲಿನಿಕ್ ಬೆಂಗಳೂರಿನಲ್ಲಿ ಆರಂಭ ಮಾಡಿರುವುದು ಶುಭ ಸೂಚನೆ. ದೆಹಲಿಯಲ್ಲಿ ಸರ್ಕಾರಿ ಶಾಲೆ ಹಾಗೂ ಆರೋಗ್ಯ ಸೇವೆ ಎಲ್ಲ ಕಡೆಯಲ್ಲಿ ಅನುಕರಣೆ ಮಾಡಲಾಗುತ್ತಿದೆ. ಕ್ಲಿನಿಕ್ ನಲ್ಲಿ ಕೇವಲ ಚಿಕಿತ್ಸೆ ನೀಡುವುದಷ್ಟೆ ಅಲ್ಲ ಔಷಧವನ್ನೂ ಉಚಿತವಾಗಿ ನೀಡುವುದು ಮಹತ್ವದ ಕೆಲಸ. ಈ ಕೆಲಸವನ್ನು ಆಮ್ ಆದ್ಮಿ ಪಕ್ಷ ಬೆಂಗಳೂರಿನಲ್ಲಿ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಮುಂದಿನ ವರ್ಷದ ಆರಂಭದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇದಕ್ಕಾಗಿ ಆಮ್ ಆದ್ಮಿ ಪಕ್ಷ ಭರ್ಜರಿ ಸಿದ್ಧತೆ ನಡೆಸಿದೆ. ಶಾಂತಿನಗರದಲ್ಲಿ ಮೊಹಲ್ಲಾ ಕ್ಲಿನಿಕ್ ಆರಂಭ ಮಾಡಿರುವ ಆಪ್, ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯಲ್ಲಿ ಮೊಹಲ್ಲಾ ಕ್ಲಿನಿಕ್ ಗಳನ್ನು ತೆರೆಯುವ ಭರವಸೆ ನೀಡುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com