ಶಿವಮೊಗ್ಗದಲ್ಲಿ ಕೊರೋನಾ ಅಬ್ಬರ ಇಳಿಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಆರ್ಭಟ ಭಾರೀ ಪ್ರಮಾಣದಲ್ಲಿ ಇಳಿದಿದ್ದು, ಕಳೆದೆರಡು ವಾರಗಳಿಂದ 50ಕ್ಕಿಂತ ಕಡಿಮೆ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡು ಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಆರ್ಭಟ ಭಾರೀ ಪ್ರಮಾಣದಲ್ಲಿ ಇಳಿದಿದ್ದು, ಕಳೆದೆರಡು ವಾರಗಳಿಂದ 50ಕ್ಕಿಂತ ಕಡಿಮೆ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡು ಬಂದಿದೆ. 

ಕಳೆದ ಸೆಪ್ಟೆಂಬರ್ ತಿಂಗಳ ಮೂರನೇ ವಾರದಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹಾಗೂ ಸಾವು ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹೇಳಿದ್ದಾರೆ. 

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲಾಗುತ್ತಿದ್ದ 250ಕ್ಕೂ ಹೆಚ್ಚು ಪ್ರಕರಣಗಳು ಅಕ್ಟೋಬರ್ ಮೊದಲ ಮತ್ತು ಎರಡನೇ ವಾರದಲ್ಲಿ ಕೇವಲ 100ಕ್ಕೆ ಇಳಿಕೆ ಕಂಡಿತ್ತು. ಅಕ್ಟೋಬರ್ ಕೊನೆಯ ವಾರದಿಂದ ಈವರೆಗೂ ಮತ್ತಷ್ಟು ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. 

ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತಿರುವುದು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ ಎಂದು ಸುರಗಿಹಳ್ಳಿ ತಿಳಿಸಿದ್ದಾರೆ. 

ಈ ನಡುವೆ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದ ಭದ್ರಾವತಿ ಹಾಗೂ ಶಿಕಾರಿಪುರದಲ್ಲಿಯೂ ಪ್ರಸ್ತುತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲಾಗುತ್ತಿದ್ದು, ಶೀಘ್ರಗತಿಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ಪರೀಕ್ಷೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಪ್ರತೀನಿತ್ಯ 2500ಕ್ಕೂ ಹೆಚ್ಚು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಇದರಲ್ಲಿ 30-60 ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com