ಮೋದಿ ಸರ್ಕಾರದ ಮಾರ್ಗದರ್ಶನದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ: ಸಿಎಂ ಯಡಿಯೂರಪ್ಪ
ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿನಂದನೆಗಳನ್ನು ತಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
Published: 11th November 2020 11:49 AM | Last Updated: 11th November 2020 12:46 PM | A+A A-

ಸಿಎಂ ಯಡಿಯೂರಪ್ಪ
ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿನಂದನೆಗಳನ್ನು ತಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದ ಪ್ರಧಾನಿ ಮೋದಿಯವರು, ಕರ್ನಾಟಕದ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃದೃಢೀಕರಿಸುತ್ತದೆ. ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
Thank you Prime Minister Shri @narendramodi Ji. With your guidance, we will continue to pursue reforms and the path of development in Karnataka. https://t.co/dvj9TIWCu7
— B.S. Yediyurappa (@BSYBJP) November 11, 2020
ಕೇಂದ್ರದ ಪ್ರಧಾನಿ ಮೋದಿ ಸರ್ಕಾರದ ಮಾರ್ಗದರ್ಶನದ ಜೊತೆಗೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮತ್ತಷ್ಟು ಹೆಚ್ಚಿಸುವ ಭರವಸೆಯನ್ನು ನೀಡಿದ್ದಾರೆ. ಆ ಮೂಲಕ ಕರ್ನಾಟಕದ ಸುಧಾರಣೆಗೆ ಪೂರಕ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ತಿಳಿಸಿದ್ದಾರೆ.