ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿ ಬಗ್ಗೆ ತನಿಖೆ ಮಾಡುತ್ತೀರೋ, ಇಲ್ಲವೊ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ 

ಕೋರ್ಟ್ ಆದೇಶ ಹೊರಡಿಸದಿದ್ದರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ ಪಿಸಿಬಿ)ಯಲ್ಲಿ ಯಾವುದೂ ಮುಂದೆ ಸಾಗುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯಶೈಲಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕೋರ್ಟ್ ಆದೇಶ ಹೊರಡಿಸದಿದ್ದರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ ಪಿಸಿಬಿ)ಯಲ್ಲಿ ಯಾವುದೂ ಮುಂದೆ ಸಾಗುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯಶೈಲಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಮಂಡಳಿಯ ಕಾರ್ಯನಿರ್ವಹಣೆ ಬಗ್ಗೆ ಹಿರಿಯ ಸೇವಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗುತ್ತದೆಯೇ ಎಂದು ಕೋರ್ಟ್ ಗೆ ತಿಳಿಸುವಂತೆ ಕೂಡ ಸೂಚಿಸಿದೆ.

ನಿನ್ನೆ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಮತ್ತು ಜಸ್ಟೀಸ್ ಎಸ್ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಹೀಗೆ ಹೇಳಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ 1974ರಲ್ಲಿ ಸ್ಥಾಪನೆಯಾಗಿದ್ದು, ಎಲ್ಲಾ ರೀತಿಯ ಮಾಲಿನ್ಯಗಳಿಗೆ ಸಂಬಂಧಿಸಿದಂತೆ ಕಾವಲು ನಾಯಿಯಂತೆ ಕೆಲಸ ಮಾಡಬೇಕು. ಆದರೆ 1987ರಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಬಗ್ಗೆ ಅದಕ್ಕೆ ಅರಿವೇ ಇಲ್ಲದಾಗಿದೆ. ಯಾವುದೇ ರೀತಿಯಲ್ಲಿ ಮಾಲಿನ್ಯ ಮಾಡಿದರೆ ಪರಿಸರ ರಕ್ಷಣೆ ಕಾಯ್ದೆ ಮತ್ತು ವಾಯು, ನೀರು(ಮಾಲಿನ್ಯ ನಿಯತ್ರಣ) ಕಾಯ್ದೆಯಡಿ ಶಿಕ್ಷಿಸುವ ಅಧಿಕಾರವಿದೆ. ಆದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಈ ಕಾಯ್ದೆ ಬಗ್ಗೆ ಅರಿವೇ ಇಲ್ಲ. ಹೀಗಾಗಿ ಹಲವು ಕೇಸುಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ, ಅಥವಾ ಆರೋಪ ದಾಖಲಾಗಿಲ್ಲ ಎಂದು ಕೋರ್ಟ್ ಹೇಳಿದೆ.

ಘನತ್ಯಾಜ್ಯ ನಿರ್ವಹಣೆ ನಿಯಮ 2016 ಮತ್ತು  ನಿರ್ಮಾಣ ಮತ್ತು ಕೆಡವಿಕೆ ನಿಷ್ಪ್ರಯೋಜಕ ನಿಯಮ 2016ರಲ್ಲಿ ಮಂಗಳೂರು ಸಿಟಿ ಕಾರ್ಪೊರೇಷನ್ ತಂದಿರುವ ನಿಯಮವನ್ನು ಸಹ ಜಾರಿಗೆ ತರುವಲ್ಲಿ ನಿರ್ಲಕ್ಷ್ಯ ತೋರಿಸಲಾಗಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com