ನ.17ರಿಂದ ಕಾಲೇಜು ಆರಂಭ: ಕೊರೋನಾ ನೆಗೆಟಿವ್ ವರದಿಯೊಂದಿಗೆ ಕಾಲೇಜಿಗೆ ಹಾಜರಾಗುವಂತೆ ಸೂಚನೆ

ಕೋವಿಡ್ 19 ಸಾಂಕ್ರಮಿಕ ರೋಗದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಶೈಕ್ಷಣಿಕ ಚಟುವಟಿಕೆಗಳನ್ನು ಕಾಲೇಜುಗಳಲ್ಲಿ ನವೆಂಬರ್ 17 ರಿಂದ ಆಫ್ ಲೈನ್ ಮತ್ತು ಆನ್ ಲೈನ್ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಆದೇಶಿಸಿದ್ದು, ಕೆಲ ಮಾರ್ಗಸೂಚಿಗಳನ್ನು ನೀಡಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದಾವಣಗೆರೆ: ಇದೇ ನವೆಂಬರ್ 17ರಿಂದ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ಅಂತಿಮ ವರ್ಷದ ಪದವಿ ತರಗತಿಗಳು ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಪ್ರಾರಂಭವಾಗುವುದರಿಂದ ತರಗತಿಗೆ ಹಾಜರಾಗುವ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಪಿ.ಎಚ್.ಸಿ ಯಲ್ಲಿ ಆರ್ ಟಿಪಿಸಿಆರ್ ಕೋವಿಡ್-19 ಟೆಸ್ಟ್ ಮಾಡಿಸಿಕೊಂಡು, ನೆಗೆಟಿವ್ ವರದಿಯೊಂದಿಗೆ ಕಾಲೇಜಿಗೆ ಹಾಜರಾಗಬೇಕು. 

ಈಗಾಗಲೇ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದಿರುವ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಲ್ಲಿ ಹಾಜರಾಗಬೇಕೆಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು: ಕೋವಿಡ್ 19 ಸಾಂಕ್ರಮಿಕ ರೋಗದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಶೈಕ್ಷಣಿಕ ಚಟುವಟಿಕೆಗಳನ್ನು ಕಾಲೇಜುಗಳಲ್ಲಿ ನವೆಂಬರ್ 17 ರಿಂದ ಆಫ್ ಲೈನ್ ಮತ್ತು ಆನ್ ಲೈನ್ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಆದೇಶಿಸಿದ್ದು, ಕೆಲ ಮಾರ್ಗಸೂಚಿಗಳನ್ನು ನೀಡಿವೆ. ಸರ್ಕಾರದ ಸಾಮಾನ್ಯ ಮಾರ್ಗಸೂಚಿಗಳ ಅನ್ವಯ ಕಾಲೇಜಿನ ಸಂಪೂರ್ಣ ಕಟ್ಟಡ. ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಿಸಬೇಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com