ಗೋಕಾಕ್: ದೀಪಾವಳಿ ದಿನವೇ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರ್ಮರಣ!
ದೀಪಾವಳಿ ಹಬ್ಬದ ಸಡಗರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪುಟ್ಟ ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಬೆಳಗಾವಿಯ ಗೋಕಾಕ್ ನಲ್ಲಿ ನಡೆದಿದೆ.
Published: 15th November 2020 08:35 PM | Last Updated: 15th November 2020 08:35 PM | A+A A-

ಅಪಘಾತದ ದೃಶ್ಯ
ಬೆಳಗಾವಿ: ದೀಪಾವಳಿ ಹಬ್ಬದ ಸಡಗರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪುಟ್ಟ ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಬೆಳಗಾವಿಯ ಗೋಕಾಕ್ ನಲ್ಲಿ ನಡೆದಿದೆ.
ಗೋಕಾಕ್ ಸಂಗೇಶ್ವರ-ನರಗುಂದ ಕಾರೊಂದಕ್ಕೆ ಟಾಟಾ ಏಸ್ ಢಿಕ್ಕಿಯಾದ ಪರಿಣಾಮ 4 ವರ್ಷದ ಓರ್ವ ಬಾಲಕಿ, ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದೆ.
ಗೋಕಾಕ್ ತಾಲೂಕಿನ ಮಮದಾಪೂರ ಕ್ರಾಸ್ ಸಮೀಪ ನಡೆದ ಘಟನೆಯಲ್ಲಿ ಮೃತಪಟ್ತವರೆಲ್ಲರೂ ರಾಮದುರ್ಗ ತಾಲೂಕಿನ ಮುರಕಟ್ನಾಳ್ ಗ್ರಾಮದವರೆನ್ನಲಾಗಿದೆ.
ಗಾಯಾಳುಗಳನ್ನು ಗೋಕಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಸಂಬಂಧ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.