ಕೋವಿಡ್-19: ರಾಜ್ಯದಲ್ಲಿ ಇಂದು 1,565 ಹೊಸ ಸೋಂಕು ಪ್ರಕರಣಗಳು ಪತ್ತೆ, 2,363 ಮಂದಿ ಗುಣಮುಖ!

ರಾಜ್ಯಾಂದ್ಯಂತ ಇಂದು 1,565 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 2,363 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯಾಂದ್ಯಂತ ಇಂದು 1,565 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 2,363 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ರಾಜ್ಯಾದ್ಯಂತ 1,565 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,61,647ಕ್ಕೆ ಏರಿಕೆಯಾಗಿದೆ. 

ಇನ್ನು ಇಂದು 21 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 11,529ಕ್ಕೆ ಏರಿಕೆಯಾಗಿದೆ. ಇಂದು ಕೂಡ ಹೊಸ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದು, ಇಂದು 2,363 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಈ  ವರೆಗೂ ರಾಜ್ಯದಲ್ಲಿ 8,22,953 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 27,146ಕ್ಕೆ ಕುಸಿದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com