15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ- ಸಚಿವ ಎಸ್. ಟಿ. ಸೋಮಶೇಖರ್

ಸಹಕಾರಿ ಚಳವಳಿ ಹಾಗೂ ಸಹಕಾರ ಕ್ಷೇತ್ರದ ಬಗ್ಗೆ ರಾಜ್ಯದ ಜನತೆಗೆ ಉಪಯುಕ್ತ ಮಾಹಿತಿಯನ್ನು ಕೊಡುವ ಕೆಲಸ ಸಹಕಾರ ಸಪ್ತಾಹದ ಮೂಲಕವಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ನಮ್ಮ ಇಲಾಖೆ ಮಾಡಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಎಸ್. ಟಿ. ಸೋಮಶೇಖರ್
ಎಸ್. ಟಿ. ಸೋಮಶೇಖರ್

ದಾವಣಗೆರೆ: ಸಹಕಾರಿ ಚಳವಳಿ ಹಾಗೂ ಸಹಕಾರ ಕ್ಷೇತ್ರದ ಬಗ್ಗೆ ರಾಜ್ಯದ ಜನತೆಗೆ ಉಪಯುಕ್ತ ಮಾಹಿತಿಯನ್ನು ಕೊಡುವ ಕೆಲಸ ಸಹಕಾರ ಸಪ್ತಾಹದ ಮೂಲಕವಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ನಮ್ಮ ಇಲಾಖೆ ಮಾಡಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

 67ನೇ ಅಖಿಲ ಭಾರತ ಸಹಕಾರ ಸಪ್ತಾಹ - 2020ರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ಠೇವಣಿ ಸಹಕಾರ ಬ್ಯಾಂಕ್ ಗಳಲ್ಲಿದೆ. 15 ಲಕ್ಷ ರೈತರಿಗೆ 10ಸಾವಿರ ಕೋಟಿ ರೂ. ಸಾಲ ವಿತರಿಸಲಾಗಿದೆ. ಲಕ್ಷಾಂತರ ಮಂದಿಗೆ ಸಹಕಾರ ಕ್ಷೇತ್ರದಿಂದ ಉದ್ಯೋಗ ಸಿಗುತ್ತಿದೆ. ಕಲಬುರಗಿಯಲ್ಲಿ ಸಹಕಾರ ಕ್ಷೇತ್ರದ ವತಿಯಿಂದ ಆಸ್ಪತ್ರೆ ಕಟ್ಟಿಸಿದ್ದು ಲಕ್ಷಾಂತರ ಮಂದಿಗೆ ಉಪಯೋಗವಾಗುತ್ತಿದೆ. ಇದೇ ರೀತಿಯಾಗಿ ರಾಜ್ಯದ ವಿವಿಧೆಡೆ ಸಹಕಾರಿಗಳಿಂದ ಹೆಚ್ಚಿನ ಉತ್ತಮ ಕೆಲಸವಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ 19 ರ ಸಂಕಷ್ಟ ಇಡೀ ದೇಶವನ್ನು ಕಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳು ಆತ್ಮನಿರ್ಭರ ಭಾರತ ಯೋಜನೆಯನ್ನು ಘೋಷಿಸಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಆರ್ಥಿಕತೆಯನ್ನು ಬಲಪಡಿಸಲು 20 ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದರು. ಇದರ ಭಾಗವಾಗಿ ರಾಜ್ಯಕ್ಕೆ 4525 ಕೋಟಿ ರೂಪಾಯಿ ಅನುದಾನ ಬಂದಿದೆ. ಇದರ ಮೂಲಕ ವಿವಿಧ ಕ್ಷೇತ್ರಗಳಿಗೆ ಸಾಲವನ್ನು ಸಹಕಾರ ಇಲಾಖೆ ಮೂಲಕ ವಿತರಣೆ ಮಾಡಲಾಗುತ್ತಿದೆ ಎಂದರು. 

 ರಾಜ್ಯದಲ್ಲಿ ಸಹಕಾರ ಇಲಾಖೆ ಮೂಲಕ ಇನ್ನೂ ಹೆಚ್ಚಿನ ಕ್ಷೇತ್ರಗಳಿಗೆ ಅನುಕೂಲ ಮಾಡಿಕೊಡಬೇಕೆಂಬ ನಿಟ್ಟಿನಲ್ಲಿ ಹೆಚ್ಚುವರಿಯಾಗಿ 600 ಕೋಟಿ ರೂಪಾಯಿ ಅನುದಾನಕ್ಕಾಗಿ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com