ಏಳು ತಿಂಗಳ ಬಳಿಕ ಮಂಗಳೂರು- ಕಾಸರಗೋಡು ನಡುವೆ ಬಸ್ ಸೇವೆ ಪುನಾರಂಭ

ಏಳು ತಿಂಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಸರಕಾರಿ ಬಸ್ ಸಂಚಾರ ಸೋಮವಾರ ಅರಂಭಗೊಂಡಿದೆ.
ಕೇರಳ ರಾಜ್ಯಗಳ ಬಸ್
ಕೇರಳ ರಾಜ್ಯಗಳ ಬಸ್

ಮಂಗಳೂರು: ಏಳು ತಿಂಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಸರಕಾರಿ ಬಸ್ ಸಂಚಾರ ಸೋಮವಾರ ಅರಂಭಗೊಂಡಿದೆ.

ಸೋಮವಾರ ಬೆಳಗ್ಗೆ 7ರಿಂದ ಸುಮಾರು 20 ಬಸ್‌ ಗಳನ್ನು ಮಂಗಳೂರಿನಿಂದ ಕಾಸರಗೋಡಿಗೆ ಮತ್ತು 20 ಬಸ್‌ಗಳು ಕಾಸರಗೋಡಿನಿಂದ ಮಂಗಳೂರಿಗೆ ಆಗಮಿಸಿವೆ. ಎರಡೂ ರಾಜ್ಯಗಳ 40 ಸರಕಾರಿ ಬಸ್‌ಗಳು ಪ್ರಯಾಣಿಕರ ಸೇವೆ ಆರಂಭಿಸಿವೆ. ಕೋವಿಡ್ 19 ನಿಯಮಗಳ ಪಾಲನೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. 

ಲಾಕ್‌ ಡೌನ್ ತೆರವಿನ ಬಳಿಕ ಹಂತ ಹಂತವಾಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿದ ವೇಳೆ ಮಂಗಳೂರಿನಿಂದ ಹೊರಟ ಸರಕಾರಿ ಬಸ್‌ಗಳು ತಲಪಾಡಿವರೆಗೆ ಚಲಿಸುತ್ತಿತ್ತು. ಇದೀಗ ಮಂಗಳೂರಿನಿಂದ ಕಾಸರಗೋಡಿಗೆ ಮತ್ತು ಕಾಸರಗೋಡಿನಿಂದ ಮಂಗಳೂರಿಗೆ ಬಸ್‌ಗಳು ಸಂಚರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com