ಮರಾಠ ಅಭಿವೃದ್ಧಿ ನಿಗಮಕ್ಕೂ, ಭಾಷೆಗೂ ಸಂಬಂಧವಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ ಸಮರ್ಥನೆ
ರಾಜ್ಯದಲ್ಲಿ ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕ್ರಮವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ವಾಗತಿಸಿದ್ದಾರೆ.
Published: 16th November 2020 03:06 PM | Last Updated: 16th November 2020 03:06 PM | A+A A-

ಲಕ್ಷ್ಮಣ್ ಸವದಿ
ಬೆಂಗಳೂರು: ರಾಜ್ಯದಲ್ಲಿ ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕ್ರಮವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ವಾಗತಿಸಿದ್ದಾರೆ.
ಮುಂಬೈ-ಕರ್ನಾಟಕ ಭಾಗದ ನಾಯಕರೂ ಆಗಿರುವ ಸವದಿ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಾನತೆಗೆ ಅವಕಾಶವಾಗುತ್ತದೆ. ಈ ಸಮುದಾಯದಲ್ಲಿ ಅತ್ಯಂತ ಬಡವರು ಮತ್ತು ಹಿಂದುಳಿದವರು ಇದ್ದಾರೆ. ಅವರ ಸಮಗ್ರ ಅಭಿವೃದ್ಧಿಗೆ ಈ ನಿಗಮದ ಸ್ಥಾಪನೆ ಸೂಕ್ತ ಎಂದು ಬಲವಾಗಿ ಸಮರ್ಥಿಸಿದ್ದಾರೆ.
ಮರಾಠ ಎಂದಾಕ್ಷಣ ಕೇವಲ ಭಾಷೆ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ. ಇದು ಸಮುದಾಯದ ಅಭಿವೃದ್ಧಿಯ ವಿಷಯವಾಗಿದೆ ಎಂದರು. ಇನ್ನು ಇದೇ ವೇಳೆ ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಇದ್ದಾರೆ. ಅವರಿಗೆ ಅನುಕೂಲ ಕಲ್ಪಿಸುವ ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಸವದಿ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದ್ದಾರೆ.