ಹಾವೇರಿ: ಹೆತ್ತ ತಾಯಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಮಗ

ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರ ಎಸಗಿ ನಂತರ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆಯೊಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗಂಗಿಬಾವಿ ರಸ್ತೆಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾವೇರಿ: ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರ ಎಸಗಿ ನಂತರ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆಯೊಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗಂಗಿಬಾವಿ ರಸ್ತೆಯಲ್ಲಿ ನಡೆದಿದೆ. 

ಪಾರವ್ವ ಲಮಾಣಿ (35) ಹತ್ಯೆಯಾದ ಮಹಿಳೆಯಾಗಿದ್ದಾರೆ. ಆಕೆಯ ಮಗ ಶಿವಪ್ಪ ಲಮಾಣಿ (21) ಎಂಬಾತನೇ ಹತ್ಯೆ ಮಾಡಿ ಅತ್ಯಾಚಾರ ಎಸಗಿದಾತನಾಗಿದ್ದಾನೆ. 

ನವೆಂಬರ್ 12 ರಂದು ತಾಯಿನ್ನು ಗಂಗಿಬಾವಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಕರೆದುಕೊಂಡು ಹೋಗಿರುವ ಆರೋಪಿ ಶಿವಪ್ಪ, ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಮರುದಿನ ಆಕೆಯ ಮೃತದೇಹ ಪತ್ತೆಯಾಗಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದಾ, ಮಗನೇ ತಾಯಿಯ ಮೇಲೆ ಅತ್ಯಾಚಾರ ಮಾಡಿ, ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com