ಟೊಯೋಟಾ ಕಿರ್ಲೋಸ್ಕರ್ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ತಮ್ಮ ಗಮನಕ್ಕೆ ಬಂದಿದ್ದು, ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ತಮ್ಮ ಗಮನಕ್ಕೆ ಬಂದಿದ್ದು, ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಾಮನಗರ ಜಿಲ್ಲೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್‌ ಕಾರ್ಖಾನೆ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದಾರೆ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 40 ಜನ ಕಾರ್ಮಿಕರನ್ನು ಅಮಾನತು ಮಾಡಲಾಗಿದೆ. 

ಅಮಾನತು ಆದೇಶ ವಾಪಸ್ ಪಡೆಯುವುದು ಹಾಗೂ ಕಾರ್ಮಿಕರಿಗೆ ಕೆಲಸದ ಅವಧಿಯಲ್ಲಿ ವಿಶ್ರಾಂತಿ ಸೇರಿದಂತೆ ಹಲವು ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಕಾರ್ಮಿಕರು ಪಟ್ಟು ಹಿಡಿದಿದ್ದರು. ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕಂಪನಿಯನ್ನು ಕೆಲವು ದಿನದಿಂದ ಲಾಕ್ ಔಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com