ಕೊರೋನಾ ಬಗ್ಗೆ ನಿರ್ಲಕ್ಷ್ಯ ಬೇಡ: ವಿದ್ಯಾರ್ಥಿಗಳಿಗೆ ಸಚಿವ ಸೋಮಶೇಖರ್ ಮನವಿ

ಇಂದಿನಿಂದ ಕಾಲೇಜುಗಳು ಆರಂಭವಾಗುತ್ತಿವೆ. ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಅತಿ ಅವಶ್ಯಕ. ಆದರೆ ಕೊರೋನಾ ಕಾರಣದಿಂದ ಈ ಕಠಿಣ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯವಿದೆ.
ಸೋಮಶೇಖರ್
ಸೋಮಶೇಖರ್

ಬೆಂಗಳೂರು: ಇಂದಿನಿಂದ ಕಾಲೇಜುಗಳು ಆರಂಭವಾಗುತ್ತಿವೆ. ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಅತಿ ಅವಶ್ಯಕ. ಆದರೆ ಕೊರೋನಾ ಕಾರಣದಿಂದ ಈ ಕಠಿಣ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯವಿದೆ. ಹೀಗಾಗಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಲೇಬೇಕು. ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮನವಿ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ಈ ಮಹಾಮಾರಿ ಬಗ್ಗೆ ನಿರ್ಲಕ್ಷ್ಯ ಬೇಡ. ಈ ಸೋಂಕು ಸಾಂಕ್ರಮಿಕ ಮಾದರಿಯಲ್ಲಿ ಹರಡುವುದರಿಂದ ಒಬ್ಬರಿಗೆ ಬಂದರೆ ಜೊತೆಗಿರುವ ಎಲ್ಲರಿಗೂ ಬರುತ್ತದೆ ಎಂಬ ಅಂಶವನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಜಾಗ್ರತೆಯಿಂದ ಇರಿ, ಸುರಕ್ಷಿತವಾಗಿರಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಕೊರೋನಾ ಕಾರಣ ಕಳೆದ 9 ತಿಂಗಳುಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸರ್ಕಾರದ ಆದೇಶದಲಂತೆ ನ.17ರ ಮಂಗಳವಾರದಿಂದ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭ ಮಾಡುತ್ತಿವೆ. 

ಶೈಕ್ಷಣಿಕ ಚಟುವಟಿಕೆಗಳನ್ನು ಆರಂಬಿಸಲು ತರಗತಿ ಕೊಠಡಿಗಳು, ಹಾಸ್ಟೆಲ್ ಕೊಠಡಿಗಳು, ಶೌಚಾಲಯ, ಪ್ರಯೋಗಾಲಯಗಳ ಸ್ವಚ್ಛತೆಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. 

ಮೊದಲ ಹಂತದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಖಉದ್ದು ತರಗತಿ ಹಾಜರಾತಿಗೆ ಅವಕಾಶ ನೀಡಲಾಗಿದೆ. ಉಳಿದ ವರ್ಷಗಳ ವ್ಯಾಸಾಂಗದ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಆನ್'ಲೈನ್ ಶಿಕ್ಷಣ ನೀಡಲು ವಿಶ್ವವಿದ್ಯಾಲಯಗಳಉ ಮತ್ತು ಕಾಲೇಜುಗಳು ತೀರ್ಮಾನ ಕೈಗೊಂಡಿವೆ. ಹಂತ ಹಂತವಾಗಿ ಎಲ್ಲಾ ವಿದ್ಯಾರ್ಥಿಗಳು ಭೌತಿಕ ತರಗತಿ ಆರಂಭಿಸುವುದಾಗಿ ತಿಳಿಸಿವೆ. 

ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪೋಷಕರಿಂದ ಲಿಖಿತ ಒಪ್ಪಿಗೆ ಪತ್ರ ನೀಡಬೇಕಿದೆ. ಬೋಧಕ ವರ್ಗ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು 72 ಗಂಟೆ ಮುಂಚಿತವಾಗಿ ಕೋವಿಡ್-19 ಆರ್'ಟಿಪಿಸಿಆರ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ನೀಡಬೇಕು ಎಂದು ಸೂಚಿಸಿವೆ. 

ತರಗತಿಗೆ ಹಾಜರಾಗುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕು, ಕಾಲೇಜು ಆವರಣ, ತರಗತಿಗಳಲ್ಲಿ ವಿದ್ಯಾರ್ಥಿಗಳು ಗುಂಪೂಗೂಡದೆ ಕನಿಷ್ಠ ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪೋಷಕರ ಒಪ್ಪಿಗೆ ಪತ್ರ ಹಾಗೂ ಕೋವಿಡ್ ಪರೀಕ್ಷೆ ಮಾಡಿಸದ ವಿದ್ಯಾರ್ಥಿಗಳು ಹಾಜರಾತಿ ನೀಡಲಾಗುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com