ಇಂದಿನಿಂದ ಪದವಿ ತರಗತಿ ಆರಂಭ; ಕೋವಿಡ್ ಮುಂಜಾಗ್ರತಾ ಕ್ರಮ ಪಾಲಿಸಿ: ವಿದ್ಯಾರ್ಥಿಗಳಿಗೆ ಸುಧಾಕರ್ ಮನವಿ

ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಮಾಸ್ಕ್ ಧರಿಸುವುದು, ಕೈಗಳ ಶುಚಿತ್ವ, ಭೌತಿಕ ಅಂತರ ಕಾಪಾಡಲು ಮರೆಯದಿರಿ. ಆತಂಕ ಬೇಡ, ಆದರೆ ಎಚ್ಚರಿಕೆ ಇರಲಿ ಎಂದು ಅವರು ಸಲಹೆ ನೀಡಿದ್ದಾರೆ.

ಇಂದಿನಿಂದ ರಾಜ್ಯಾದ್ಯಂತ ಅಂತಿಮ ವರ್ಷದ ಪದವಿ ತರಗತಿಗಳು ಆರಂಭವಾಗಿದ್ದು,  ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಕೋವಿಡ್-19 ಪರೀಕ್ಷೆಮಾಡಿಸಿಕೊಂಡು ನೆಗಟಿವ್ ವರದಿ ಹಾಗೂ ಪೋಷಕರ ಒಪ್ಪಿಗೆ ಪತ್ರದೊಂದಿಗೆ ಬರುವಂತೆ ಸೂಚಿಸಲಾಗಿತ್ತು. ಅಂತಹವರನ್ನು ಮಾತ್ರ ತರಗತಿ ಯೊಳಗೆ ಬರಲು ಅವಕಾಶ ಕಲ್ಪಿಸಲಾಗಿದೆ. ಡಿಪ್ಲೋಮಾ, ಇಂಜನೀಯರಿಂಗ್ ಹಾಗೂ ವಿವಿಧ ಪದವಿಯ ಅಂತಿಮ ವರ್ಷದ ತರಗತಿಗಳು ಮಾತ್ರ ಇಂದಿನಿಂದ ಆರಂಭಗೊಂಡಿವೆ. 

ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗುವುದು ಕಡ್ಡಾಯವಲ್ಲ.ಕಾಲೇಜುಗಳ ಆಡಳಿತ ಮಂಡಳಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸುವಂತಿಲ್ಲ. ಕಾಲೇಜಿಗೆ ಹಾಜರಾಗುವುದು ವಿದ್ಯಾರ್ಥಿಗಳು ಹಾಗೂ ಅವರ ಪಾಲಕರ ಆಯ್ಕೆಗೆ ಬಿಟ್ಟಿದ್ದು.   ಆಫ್ಲೈನ್ ಮತ್ತು ಆನ್ಲೈನ್ ತರಗತಿಗಳು ಮುಂದುವರೆಯಲಿವೆ. ಕಾಲೇಜಿಗೆ ಹಾಜರಾಗಿದ್ದರೆ ಆನ್ಲೈಿನ್ ತರಗತಿ ಮೂಲಕ ತಮ್ಮ ಅಭ್ಯಾಸ ಮುಂದುವರಿಸಬಹುದು ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com