ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿಗೆ; ಕೋರ್ಟ್ ಆದೇಶ

ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದೆ. 

Published: 17th November 2020 04:48 PM  |   Last Updated: 17th November 2020 04:52 PM   |  A+A-


Sampath Raj

ಸಂಪತ್ ರಾಜ್

Posted By : Vishwanath S
Source : Online Desk

ಬೆಂಗಳೂರು: ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದೆ. 

ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಬಂಧನಕ್ಕಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿದ್ದು, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಿತ್ತು. ಇನ್ನು ಸಂಪತ್ ಸೆರೆ ಸಿಕ್ಕ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಅವರನ್ನು ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಸಂಪತ್ ರನ್ನು 10 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಆದರೆ ಕೋರ್ಟ್ 2 ದಿನಕ್ಕೆ ಮಾತ್ರ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. 

ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಸಂಪತ್ ರಾಜ್ ನನ್ನು ಬಂಧಿಸಿದ್ದರು. ಅಂತಿಮವಾಗಿ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.

ವಿವಾದಿತ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಆಗಸ್ಟ್ 11ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ 300ಕ್ಕೂ ಹೆಚ್ಚು ಉದ್ರಿಕ್ತರ ಗುಂಪು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಯ ಮೇಲೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಈವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ 421 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp