ರಾಜ್ಯದಲ್ಲಿಂದು 1,791 ಕೊರೋನಾ ಪ್ರಕರಣ ಪತ್ತೆ, 1,947 ಡಿಸ್ಚಾರ್ಜ್!

ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಹಾವಳಿ ಕಡಿಮೆಯಾಗುತ್ತಿದ್ದು ಇಂದು 1,791 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಹಾವಳಿ ಕಡಿಮೆಯಾಗುತ್ತಿದ್ದು ಇಂದು 1,791 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 1,791 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ 8,65,931ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 21 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,578 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,791 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,29,188 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,146 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 933 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,59,539ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,028ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com