ರಾಜ್ಯ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ನಮೂದು ಪುನರಾರಂಭ

ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಮತ್ತೆ ಹಾಜರಾತಿಗೆ ಬಯೋಮೆಟ್ರಿಕ್ ನಮೂದಿಸುವುದು ಕಡ್ಡಾಯವಾಗಿದೆ.

Published: 18th November 2020 06:55 PM  |   Last Updated: 18th November 2020 06:55 PM   |  A+A-


for representation purpose only

ಸಂಗ್ರಹ ಚಿತ್ರ

Posted By : Vishwanath S
Source : UNI

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಮತ್ತೆ ಹಾಜರಾತಿಗೆ ಬಯೋಮೆಟ್ರಿಕ್ ನಮೂದಿಸುವುದು ಕಡ್ಡಾಯವಾಗಿದೆ.
 
ಕೊರೋನಾ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ಮೇ 31ರಿಂದ ಬಯೋಮೆಟ್ರಿಕ್ ಹಾಜರಾತಿ ನಮೂದಿಸುವಲ್ಲಿ ವಿನಾಯಿತಿ ನೀಡಲಾಗಿತ್ತು.
 
ಪ್ರಸ್ತುತ ಕೋವಿಡ್ -19 ಪ್ರಕರಣಗಳು ಮತ್ತು ಪಾಸಿಟೀವ್ ಪ್ರಕರಣಗಳ ಸಂಖ್ಯೆ ಬೆಂಗಳೂರು ಮತ್ತು ಬೆಂಗಳೂರಿನ ಹೊರಗೆ ಕಡಿಮೆಯಾಗುತ್ತಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರಾರಂಭಿಸಲಾಗಿದೆ. ಹಾಗೆಯೇ ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸ್ಯಾನಿಟೈಸರ್‍ಗಳ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಅಧಿಕೃತ ಪ್ರಕಟಣೆ ತಿಳಿಸಿದೆ.

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp